ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲಾ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಪೆಡ್ಲರ್ಗಳನ್ನು ಬಂಧಿಸಿ ಬಂಧಿತ ಆರೋಪಿಗಳಿಂದ 13 ಲಕ್ಷ ರೂ. ಮೌಲ್ಯದ 17.89 ಕೆ.ಜಿ ಗಾಂಜಾ ವಶ ಪಡಿಸಿಕೊಂಡಿದ್ದಾರೆ.
ಗಾಂಜಾ ಸಾಗಿಸುತ್ತಿದ್ದ ಇಬ್ಬರು ಪೆಡ್ಲರ್ಗಳಾದ ಮೈಸೂರಿನ ರಾಕೇಶ್, ಮಂಡ್ಯದ ಹರ್ಷ ಪಿ.ಜೆ. ಬಂಧಿತ ಆರೋಪಿಗಳು ಎನ್ನಲಾಗಿದೆ.
ತುಮಕೂರು ನಗರದ ಗಾರ್ಡನ್ ರಸ್ತೆಯ ಟೂಡಾ ಲೇಔಟ್ನಲ್ಲಿ ಮಾರಾಟ ಮಾಡಲು ಆರೋಪಿಗಳು ಗಾಂಜಾ ಸಾಗಾಟ ಮಾಡುತ್ತಿದ್ದರು.
ಈ ಕುರಿತು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸರು ಕಾರ್ಯಾಚರಣೆ ಮಾಡಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.