ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನೆ, ಮನ ಬೆಳಗುವ ಹೆಣ್ಣು ಸಂಸಾರದ ಕಣ್ಣು ಮಾತ್ರವಲ್ಲ, ಸಮಾಜದ ಶಕ್ತಿ ಕೂಡ ಆಗಿದ್ದಾಳೆ. ಹೆಣ್ಣುಮಕ್ಕಳು ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಸಾಧನೆ ಮಾಡಿದರೂ, ಇಂದಿಗೂ ಲಿಂಗತಾರತಮ್ಯವೆಂಬುದು ಸಮಾಜದಲ್ಲಿ ಜೀವಂತವಿದೆ ಎನ್ನುವುದನ್ನು ಒಪ್ಪಿಕೊಂಡು,
ಅವರು ಎದುರಿಸುತ್ತಿರುವ ಸವಾಲು ಹಾಗೂ ಸಮಸ್ಯೆಗಳ ವಿರುದ್ಧದ ಹೋರಾಟಕ್ಕೆ ಪ್ರತಿಯೊಬ್ಬರೂ ಸಹ ಜೊತೆಗೂಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯಾವುದೇ ತೆರನಾದ ಅಸಮಾನತೆ, ಶೋಷಣೆಯಿಲ್ಲದ, ಸಮಾನ ಗೌರವ, ಅವಕಾಶ ಹಾಗೂ ಸ್ವಾತಂತ್ರ್ಯವನ್ನು ಕಲ್ಪಿಸಿಕೊಡುವ ಸಮಸಮಾಜ ನಿರ್ಮಾಣ ನಮ್ಮ ಸಂಕಲ್ಪವಾಗಲಿ ಎಂದು ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನದ ಸಂದರ್ಭದಲ್ಲಿ ಆಶಿಸುತ್ತೇನೆ ಎಂದು ಸಿಎಂ ಹೇಳಿದರು.
ನಾಡಿನ ನನ್ನೆಲ್ಲಾ ಪ್ರೀತಿಯ ಅಕ್ಕ ತಂಗಿಯರಿಗೆ, ತಾಯಂದಿರಿಗೆ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳದಿನದ ಶುಭಾಶಯಗಳು. ನಿಮ್ಮ ಜೊತೆ ಕರ್ನಾಟಕ ಸರ್ಕಾರ ಸದೃಢವಾಗಿ ನಿಂತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

