ಜುಲೈ 18ರಂದು ವಿದ್ಯುತ್ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 220/66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ

- Advertisement - 

ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಜುಲೈ 18ರಂದು  ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್  ವ್ಯತ್ಯಯವಾಗಲಿದೆ.

- Advertisement - 

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : ಕಾಪರ್ ಮೈನ್ಸ್, ಕ್ಯಾದಿಗೆರೆ, ಜೆ.ಎನ್.ಕೋಟೆ, ಕಾಸವರಹಟ್ಟಿ, ಪಲ್ಲವಗೆರೆ, ಇಂಡಸ್ಟ್ರಿಯಲ್ ಏರಿಯಾ, ಕೋಟೆ, ಜಿಲ್ಲಾ ಪಂಚಾಯತ್, ಸಜ್ಜನಕೆರೆ, ದಂಡಿನಕುರುಬರಹಟ್ಟಿ, ಕೆನ್ನೆಡಲು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ  ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";