ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರ್ಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ 5 ರಿಂದ 18 ವರ್ಷದೊಳಗಿನ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳನ್ನು ಮಾಡಿದ ಎಲ್ಲಾ ಮಕ್ಕಳು ಇಲಾಖೆಯ ವೆಬ್‌ಸೈಟ್ https://awards.gov.in  ಮೂಲಕ ಜುಲೈ 31ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸರ್ಕಾರಿ ವೀಕ್ಷಣಾಲಯ ಕಟ್ಟಡ, 100 ಅಡಿರಸ್ತೆ, ಆಲ್ಕೋಳ, ಶಿವಮೊಗ್ಗ, ದೂ.ಸಂ.: 08182-295709 ನ್ನು ಸಂಪರ್ಕಿಸುವುದು.

 

- Advertisement - 

Share This Article
error: Content is protected !!
";