ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿದ ಪ್ರಾಂಶುಪಾಲ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಜರುಗಿದೆ.

ಅಯ್ಯಪ್ಪ ಮಾಲೆ ಧರಿಸಿ ಕಾಲೇಜ್ ಗೆ ಬಂದಿದ್ದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಹಿಂದೂ ಸಂಘಟನೆ
, ಬಿಜೆಪಿ ಕಾರ್ಯಕರ್ತರು ಈ ವಿಚಾರ ತಿಳಿಯುತ್ತಿದ್ದಂತೆಯೇ ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿರುವ ಘಟನೆ ಜರುಗಿದೆ.

- Advertisement - 

 ಚಿಕ್ಕಮಗಳೂರು ನಗರದ ಎಇಎಸ್ ಪಿಯು ಕಾಲೇಜಿನಲ್ಲಿ ಮೊದಲ ವರ್ಷದ ಪಿಯು ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದು ಇದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿ ಅಯ್ಯಪ್ಪ ಮಾಲೆ‌ತೆಗೆದು ಬರುವಂತೆ ಮಾಲಾಧಾರಿಗಳಿಗೆ ಸೂಚನೆ ನೀಡಿ ಹೊರಗೆ ಕಳುಹಿಸಿದ್ದಾರೆ.

ಅಯ್ಯಪ್ಪ ಮಾಲೆ ಧರಿಸಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರ ಹಾಕಿರುವ ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿ ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದರು.

- Advertisement - 

ಕಾಲೇಜು ಬಳಿ ನೂರಾರು ಹಿಂದೂ ಸಂಘಟನೆ ಕಾರ್ಯಕರ್ತರು ಆಗಮಿಸಿ ಆಡಳಿತ ಮಂಡಿಳಿ ವಿರುದ್ಧ ಆಕ್ರೋಶ ವ್ಯಕ್ತಡಿಸಿ, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂ ಸಂಘಟನೆಗಳು ಮತ್ತು ಪ್ರಾಂಶುಪಾಲರ ಮಧ್ಯ ನಡೆದ ವಾದ ವಿವಾದದ ಬಳಿಕ ಅಂತಿಮವಾಗಿ ಅಯ್ಯಪ್ಪ ಮಾಲೆ ಹಾಕಿಕೊಂಡು ಬಂದಿದ್ದ ಮೂವರು ವಿದ್ಯಾರ್ಥಿಗಳನ್ನು ತರಗತಿಗೆ ಕೂಡಲು ಪ್ರಿನ್ಸಿಪಾಲ್ ಅನುಮತಿ ನೀಡಿದ್ದಾರೆ. ಜೊತೆಗೆ ಆಡಳಿತ ಮಂಡಳಿ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಪ್ರಾಂಶುಪಾಲರ ಸ್ಪಷ್ಟನೆ
ಎಂಇಎಸ್ ಪಿಯು ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಪ್ರತಿಕ್ರಿಯಿಸಿ ಸರ್ಕಾರ ಹಾಗೂ ಕಾಲೇಜು ಆಡಳಿತ ಮಂಡಳಿಯ ಆದೇಶ ಪಾಲಿಸಿದ್ದೇವೆ. ನಮ್ಮಲ್ಲಿ ಸಮವಸ್ತ್ರ ಬಿಟ್ಟು ಬೇರೆ ಯಾವುದೇ ಬಟ್ಟೆ ಧರಿಸುವಂತಿಲ್ಲ. ವಿದ್ಯಾರ್ಥಿಗಳಿಗೆ ನಾವು ತಿಳಿ ಹೇಳಿದ್ದೇವೆ ಅಷ್ಟೇ. ಸದ್ಯಕ್ಕೆ ಮೂವರು ವಿದ್ಯಾರ್ಥಿಗಳನ್ನ ತರಗತಿಗೆ ಕೂರುವಂತೆ ಸೂಚನೆ ನೀಡಿದ್ದು
, ಈ ಬಗ್ಗೆ ಆಡಳಿತ ಮಂಡಳಿಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಪ್ರಾಂಶುಪಾಲರು ಸ್ಪಷ್ಟಪಡಿಸಿದ್ದಾರೆ.

Share This Article
error: Content is protected !!
";