ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನೊಂದಾಯಿತ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಗೆ ಮಾರ್ಚ್
01 ರಿಂದ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದ್ದು ಮಾರ್ಚ್ 03 ರಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸ ಲಾಗುತ್ತಿದ್ದು, ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ರಾಗಿಯನ್ನು ನಿಯಮಾನುಸಾರ ನೀಡ ಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ. 

- Advertisement - 

2024-25 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೊಂದಾಯಿಸಿ ಕೊಳ್ಳಲಾಗಿದೆ. 

- Advertisement - 

ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖರೀದಿ ಏಜೆನ್ಸಿ ಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳಾದ ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630), ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಹೆಚ್.ಎನ್ ನಾರಾಯಣ್(9886141435), ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687), ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";