ವಿಶ್ವವಿದ್ಯಾಲಯಗಳ ಗುಣಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅನುದಾನ ನೀಡದ ಪರಿಣಾಮ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ರಾಜ್ಯದ ವಿಶ್ವವಿದ್ಯಾಲಯಗಳ ಗುಣಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿದಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ವಿದ್ಯಾರ್ಥಿಗಳು ಸಹ ಸರ್ಕಾರಿ ವಿವಿಗಳಿಗೆ ಸೇರಲು ಹಿಂಜರಿಯುತ್ತಿದ್ದಾರೆ. ಉಪನ್ಯಾಸಕರು ಮತ್ತು ನಿವೃತ್ತ ಸಿಬ್ಬಂದಿಗೆ ಸಂಬಳ ಮತ್ತು ಪಿಂಚಣಿಗಳನ್ನು ಸರಿಯಾಗಿ ಪಾವತಿಸಲಾಗಿಲ್ಲ. ಉಪನ್ಯಾಸಕರ ನೇಮಕಾತಿ ಇಲ್ಲದಿರುವಾಗ, ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳ ಪಾಲಿಗೆ ಮರೀಚಿಕೆ.

- Advertisement - 

ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿನ ಆರ್ಥಿಕ ಬಿಕ್ಕಟ್ಟು ಖಾಸಗಿ ವಿಶ್ವವಿದ್ಯಾಲಯಗಳ ಪಾಲಿಗೆ ವರವಾಗಿದ್ದು, ಹೆಚ್ಚಿನ ಶುಲ್ಕದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದು ಕಾಂಗ್ರೆಸ್‌ಸರ್ಕಾರವು ವಿದ್ಯಾರ್ಥಿಗಳಿಗೆ ಮಾಡುತ್ತಿರುವ ದ್ರೋಹವಾಗಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

 

- Advertisement - 

 

Share This Article
error: Content is protected !!
";