ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅವ್ಯಾಹತ ಭ್ರಷ್ಟಾಚಾರ, ಒಲೈಕೆ ರಾಜಕಾರಣ ನಡೆಸುತ್ತಾ, ರಾಜ್ಯದ ಜನರ ತೆರಿಗೆ ಹಣವನ್ನು ಲೂಟಿ ಹೊಡೆದು ಕರ್ನಾಟಕ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆ ಬರಿದು ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ.
ಅನುದಾನವಿಲ್ಲದೇ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಲು ಆಗದೆ, ಕೇತ್ರದ ಜನರ ಬೇಡಿಕೆಗಳಿಗೆ ಸ್ಪಂದಿಸಲಾಗದೆ ಶಾಸಕರು ನಲುಗಿ ಹೋಗಿದ್ದಾರೆ. ಆಡಳಿತ ಪಕ್ಷದ ಶಾಸಕರೊಬ್ಬರು ತಮ್ಮ ಸರ್ಕಾರದಲ್ಲಿ ಅನುದಾನಕ್ಕೂ ಕೊರತೆಯಾಗಿದೆ ಎಂದು ಬಹಿರಂಗವಾಗಿ ಅಂಗಲಾಚುವ ಪರಿಸ್ಥಿತಿ ಬಂದಿದೆ.
ಅಕ್ಕಿ, ಇನ್ನೊಂದು ಬೇಡ ಎಂದರೆ ರಸ್ತೆ ಮಾಡ್ತೀವಿ, ರಸ್ತೆ ಬೇಕು ಎಂದರೆ ಗ್ಯಾರಂಟಿ ಸ್ಕೀಂ ನಿಲ್ಲಿಸಲು ಹೇಳ್ತಿನಿ ಎಂದು ಸ್ವತಃ ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರೇ ಹೇಳಿದ್ದಾರೆ.
ಅನುದಾನದ ವಿಚಾರದಲ್ಲಿ ರಾಜು ಕಾಗೆ ಅಸಮಾಧಾನಗೊಂಡು ರಾಜೀನಾಮೆಗೆ ಮುಂದಾಗಿದ್ದರು, ಒಂದು ಚರಂಡಿ ನಿರ್ಮಿಸಲು ಅನುದಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಎನ್. ವೈ. ಗೋಪಾಲಕೃಷ್ಣ ಹೇಳಿದ್ದರು. ಗೃಹ ಸಚಿವ ಡಾ.ಪರಮೇಶ್ವರ ಕೂಡ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಬಹಿರಂಗವಾಗಿ ಹೇಳಿದ್ದರು. ಈಗ ಮುಖ್ಯಮಂತ್ರಿಗಳ ಅರ್ಥಿಕ ಸಲಹೆಗಾರರೇ ರಸ್ತೆ ಬೇಕು ಎಂದರೆ ಗ್ಯಾರಂಟಿ ಸ್ಕೀಂ ನಿಲ್ಲಿಸಲು ಹೇಳ್ತಿನಿ ಎನ್ನುವ ಮೂಲಕ ಸರ್ಕಾರದ ಅರ್ಥಿಕ ಸ್ಥಿತಿಗತಿಯನ್ನು ತಿಳಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ ಒಲೈಕೆ ರಾಜಕಾರಣಕ್ಕೆ ಅನುದಾನ ಬಿಡುಗಡೆ ಮಾಡುವ ನಿಮಗೆ, ಅಭಿವೃದ್ಧಿ ಕಾಮಗಾರಿಗೆ ಅನುದಾನ ನೀಡಲು ನಿಮ್ಮ ಸರ್ಕಾರದ ಬಳಿ ದುಡ್ಡಿಲ್ಲವೇ..? ಎಂದು ಬಿಜೆಪಿ ತೀಕ್ಷ್ಣವಾಗಿ ಪ್ರಶ್ನಿಸಿದೆ.