ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿಯವರ ಹೆಗಲ ಮೇಲೆ ಕೇಸರಿ ಶಾಲು ಹೋಯ್ತು, ನೀಲಿ ಶಾಲು ಬಂತು! ನನಗೆ ಇದೊಂದು ವಿಶೇಷ ವಿಸ್ಮಯದಂತೆ ಭಾಸವಾಗುತ್ತಿದೆ!! ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜೈ ಭೀಮ್ ಎನ್ನುವುದು ಫ್ಯಾಷನ್ ಎಂದಿದ್ದ ಅಮಿತ್ ಶಾವರ ಬಿಜೆಪಿಗೆ, ನೀಲಿ ಶಾಲು ಧರಿಸುವುದು ಈಗ ಹೊಸ “ಫ್ಯಾಷನ್“ ಆಗಿದೆಯೇ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.
ಅಥವಾ ಕೇಸರಿ ಶಾಲಿನ ಮೇಲೆ ಬಿಜೆಪಿಗರಿಗೆ ಅಸಹನೆ ಉಂಟಾಗಿದೆಯೇ?
ಕೇಸರಿ ಶಾಲು ಕಂಡರೆ ನಿರ್ಲಕ್ಷ್ಯವೇ? ಕೇಸರಿ ಶಾಲಿನಿಂದ ಸಂವಿಧಾನದ ಅನುಯಾಯಿಗಳನ್ನು ಎದುರಿಸಲು ಸಾಧ್ಯವಿಲ್ಲ ಎನ್ನುವುದು ಕರ್ನಾಟಕದ ಬಿಜೆಪಿಯವರಿಗೆ ಅರ್ಥವಾದಂತಿದೆ ಎಂದು ಸಚಿವರು ವ್ಯಂಗ್ಯವಾಡಿದ್ದಾರೆ.