ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಿಮ್ಮ ಕೈ ಕೆಳಗೆ ಕೆಲಸ ಮಾಡುವ
, ನಿಮಗೆ ರಿಪೋರ್ಟ್ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ ಸಿಎಂ ಸಿದ್ದರಾಮಯ್ಯ ನವರೇ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

ಕಾರ್ಯಕ್ರಮದ ಬಗ್ಗೆ ಯೋಚನೆ ಮಾಡಿ, ಅದರ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ತಪ್ಪುಗಳು, ಲೋಪದೋಷಗಳು, ಎಡವಟ್ಟುಗಳು ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ ವರದಿ ನೀಡುತ್ತಾರೆ ಅಂದರೆ ಅದನ್ನು ನಂಬಲು ಸಾಧ್ಯವೇ ಮುಖ್ಯಮಂತ್ರಿಗಳೇ? ಜನಸಾಮಾನ್ಯರಿಗೆ ವಂಚನೆ ಮಾಡಿ ಹೆಣಗಳನ್ನ ಉರುಳಿಸಿದ್ದಾಯ್ತು, ಈಗ ನಿಮಗೆ ನೀವೇ ಆತ್ಮ ವಂಚನೆ ಮಾಡಿಕೊಂಡು ಇನ್ನೊಂದು ಪಾಪ ಯಾಕೆ ಕಟ್ಟಿಕೊಳ್ಳುತ್ತೀರಿ?

- Advertisement - 

ನ್ಯಾಯಾಂಗ ತನಿಖೆಯಿಂದ ಮಾತ್ರ ಅಮಾಯಕ ಜೀವಗಳಿಗೆ, ಅವರ ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ನಿಮ್ಮ ಸಣ್ಣತನ ಪ್ರದರ್ಶನ ಮಾಡುವ ದುಸ್ಸಾಹಸ ಮಾಡಬೇಡಿ ಎಂದು ಅಶೋಕ್ ತಾಕೀತು ಮಾಡಿದ್ದಾರೆ.

 

- Advertisement - 

Share This Article
error: Content is protected !!
";