ಶಿರಾ ನಗರಸಭೆ ಆಡಳಿತ ಕಾಂಗ್ರೆಸ್ ತೆಕ್ಕೆಗೆ

News Desk

ಚಂದ್ರವಳ್ಳಿ ನ್ಯೂಸ್, ಶಿರಾ:
ಶಿರಾ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತೆಕ್ಕೆಗೆ ಆಡಳಿತ ಬಂದಿದೆ.

ಶಿರಾ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಜೀಶನ್ ಮೊಹಮದ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಲಕ್ಷ್ಮಿಕಾಂತ್ ಅವರಿಗೆ ಶಾಸಕ ಟಿ.ಬಿ.ಜಯಚಂದ್ರ ಅಭಿನಂದನೆ ಸಲ್ಲಿಸಿದ್ದಾರೆ. 

ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ನೆರವಾದ ನಗರಸಭಾ ಸದಸ್ಯರಿಗೆ ಮತ್ತು ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್ ಅವರಿಗೆ ಜಯಚಂದ್ರ ಅವರು ಧನ್ಯವಾದ ಅರ್ಪಿಸಿದ್ದಾರೆ.  

- Advertisement -  - Advertisement - 
Share This Article
error: Content is protected !!
";