ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಹೋರಾತ್ರಿ ಧರಣಿ ಕೈಗೊಂಡಿದ್ದಾರೆ. ಆದರೂ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸುವ ಕೆಲಸ ಮಾಡಿಲ್ಲ ಎಂದು ಬಿಜೆಪಿ ಟೀಕಿಸಿದೆ.
ಗುತ್ತಿಗೆ ಶುಶ್ರೂಷಾಧಿಕಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ ಸೂಚಿಸಿ ಮನವಿಯನ್ನು ಸ್ವೀಕರಿಸಿದೆ. ವಿಧಾನಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಅವರು ಹೋರಾಟಗಾರರ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಹೇಳಿದರು.
ಇದೇ ವೇಳೆ ರಾಜ್ಯ ಕಾಂಗ್ರೆಸ್‌ಸರ್ಕಾರದ ಪಾಪದ ಕೊಡ ತುಂಬಿದೆ. ಇಂದೋ ನಾಳೆ ಎಂಬ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಪರಿಷತ್‌ವಿಪಕ್ಷನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.