ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚನ್ನಪಟ್ಟಣ ಉಪಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್‌ಸರ್ಕಾರದ ಕಾಂಚಾಣ ಸದ್ದು ಮಾಡುತ್ತಿದ್ದು ಖಾತೆ ಸಚಿವರೊಬ್ಬರು ಬಹಿರಂಗವಾಗಿ ಹಣ ಹಂಚುತ್ತಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮಾಡಿ ಆರೋಪಿಸಿದೆ.
ರಾಜ್ಯದಲ್ಲಿ ಪರ್ಸಂಟೇಜ್‌ಕಾಂಗ್ರೆಸ್‌ಸರ್ಕಾರ ತೊಲಗಿಸಿ ಚನ್ನಪಟ್ಟಣದ ಸರ್ವಾಂಗೀಣ ಅಭಿವೃದ್ಧಿ ಮಾಡೋಣ ಎಂದು ಅದು ಕರೆ ನೀಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರವನ್ನು, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಮತದಾರರಿಗೆ ಹಲವು ಆಮೀಷಗಳನ್ನು ಒಡ್ಡುತ್ತಿದೆ.
ಪ್ರಚಾರದ ವೇಳೆ ಸಾರ್ವಜನಿಕವಾಗಿ ಜಮೀರ್ಅಹಮದ್, ಗರಿ ಗರಿ ನೋಟುಗಳನ್ನು ಕೊಟ್ಟು ಜನರಿಗೆ ಮತಹಾಕುವಂತೆ ಒತ್ತಡ ಹೇರಿದ್ದಾರೆ.
ರಾಜ್ಯ ಚುನಾವಣಾ ಆಯೋಗವು ಕಾಂಗ್ರೆಸ್‌ನಾಯಕರ ಈ ಹಣ ಹಂಚಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ಸಚಿವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷ ಆಗ್ರಹಿಸಿದೆ.