ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಹನಿಟ್ರ್ಯಾಪ್ ಬ್ರಿಗೇಡ್ ಗಳದ್ದೇ ಸದ್ದು!!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಈಗ ಹನಿಟ್ರ್ಯಾಪ್ ಬ್ರಿಗೇಡ್ ಗಳದ್ದೇ ಸದ್ದು!! ಎಂದು ಬಿಜೆಪಿ ಟ್ವೀಟ್ ಮಾಡಿ ಟೀಕಿಸಿದೆ.

ಸಂತ ಶರಣರ ನಾಡಾಗಿದ್ದ ಕಲ್ಬುರ್ಗಿ, ರೌಡಿ-ಗೂಂಡಾ-ಹನಿಟ್ರ್ಯಾಪ್ ಬ್ರಿಗೇಡ್, ಗಾಂಜಾ ನಾಡಾಗುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿ ಎಂದು ಬೇಸರ ವ್ಯಕ್ತ ಪಡಿಸಿದೆ.

ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಕಾಂಗ್ರೆಸ್ ನ ಕಾರ್ಯಕರ್ತರೆ, ಹನಿಟ್ರ್ಯಾಪ್ ಬಲೆಗೆ ಕೆಡುವುತ್ತಾರೆಂದರೆ, ಕಾಂಗ್ರೆಸ್ಸಿಗರಲ್ಲಿ ಎಲ್ಲವೂ ಸರಿಯಿಲ್ಲ ಎಂದರ್ಥ!! ಎಂದು ಬಿಜೆಪಿ ಅಚ್ಚರಿ ವ್ಯಕ್ತ ಪಡಿಸಿದೆ.

 ಪ್ರಿಯಾಂಕ ಖರ್ಗೆ ಅವರೆ, ನಿಮ್ಮ ಕಾರ್ಯಕರ್ತರ ಹಾಗೂ ನಾಯಕರ ನಡುವಿನ ಹನಿಟ್ರ್ಯಾಪ್ ನ ಫ್ಯಾಕ್ಟ್ ಚೆಕ್ ಅನ್ನು ಯಾವಾಗ ಮಾಡಿಸುವಿರಿ..??!! ಎಂದು ಬಿಜೆಪಿ ಲೇವಡಿ ಮಾಡಿದೆ.

ಏನಿದು ಪ್ರಕರಣ-
ಕಾಂಗ್ರೆಸ್‌ಪಕ್ಷದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್​ ಅವರಿಗೆ ವಾಟ್ಸಪ್​ ಮೂಲಕ ವಿಡಿಯೋ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ಕಲಬುರಗಿ ಘಟಕದ ನಲಪಾಡ್ ಬ್ರಿಗೇಡ್‌ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗುತ್ತೇದಾರ್​ ಅವರೊಂದಿಗೆ ನಡೆಸಿದ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ಪಾಟೀಲರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಪಾಟೀಲ್ ಹನಿ ಟ್ರ್ಯಾಪ್ ಖೆಡ್ಡಾಗೆ ಮಾಜಿ ಸಚಿವರಷ್ಟೇ ಅಲ್ಲ, ಇನ್ನು ಗಣ್ಯರನ್ನು ಖೆಡ್ಡಾಗೆ ಬೀಳಿಸಿರುವ ಮಾಹಿತಿ ಆಕೆಯ ಮೊಬೈಲ್​ನಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ.

ಕಾಂಗ್ರೆಸ್​ನಲ್ಲಿ ಸಕ್ರಿಯವಾಗಿದ್ದು ಮಂಜುಳಾ ಹಲವು ವರ್ಷಗಳಿಂದ ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಹೀಗಾಗಿ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಇಬ್ಬರೂ ದಿನ ಮೊಬೈಲ್‌ನಲ್ಲಿ ಸಲುಗೆಯಿಂದ ಮಾತನಾಡುತ್ತಿದ್ದು ಆ ಎಲ್ಲ ಮಾತುಗಳನ್ನು ಆಕೆ ರೆಕಾರ್ಡ್ ಮಾಡಿಕೊಂಡಿದ್ದಾಳೆ. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಮಂಜುಳಾ, ಆ ಆಡಿಯೋ-ವಿಡಿಯೋಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

ಡೀಲ್ ಕುದುರಿಸಲು ಬೆಂಗಳೂರಿಗೆ ಆಗಮಿಸಿದ್ದ ದಂಪತಿ ಮಾಲೀಕಯ್ಯ ಪುತ್ರ ರಿತೀಶ್ ಅವರನ್ನು ಭೇಟಿಯಾಗಿದ್ದರು.
ಈ ವಿಚಾರವಾಗಿ ರಿತೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಕೋರ್ಟ್ ಎಂಟು ದಿನ ಪೊಲೀಸ್‌ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಂಧಿತ ಆರೋಪಿ ಮಂಜುಳಾ ಪಾಟೀಲ್ ಬಳಿ 6 ಸ್ಮಾರ್ಟ್ ಪೋನ್ ಪತ್ತೆ‌ಯಾಗಿದ್ದು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದಾಗ ಬರೋಬ್ಬರಿ ಎಂಟು ಜನರ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ.

ಮೊಬೈಲ್ ನಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲೂಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಈ ಬಗ್ಗೆ ಸಿಸಿಬಿ ಪೊಲೀಸರು ಒಂದೊಂದಾಗಿ ಪರಿಶೀಲನೆ ನಡೆಸುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";