ದೇವೇಗೌಡರಿಗೆ ಶ್ರೀಗಂಗ ಸಾಮ್ರಾಟ ಪ್ರಶಸ್ತಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಸಂತಶ್ರೇಷ್ಠರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ ದೇವೇಗೌಡ ಅವರಿಗೆ ಶ್ರೀಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು, ಶ್ರೀ ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಸಿದ್ದಗಂಗಾ ಮಠದ ಜಗದ್ಗುರು ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ, ಸ್ಫಟಿಕಪುರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ,

- Advertisement - 

ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ, ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಠದ ಶ್ರೀ ನಿಶ್ಚಲಾನಂದ ಸ್ವಾಮೀಜಿ ಅವರುಗಳೆಲ್ಲರೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಿ ಆಶೀರ್ವದಿಸಿದರು.

- Advertisement - 

ಮಾಜಿ ಪ್ರಧಾನಿಗಳ ಕುರಿತಾಗಿ ನಾಡಿನ ಹಿರಿಯ ಪತ್ರಕರ್ತರಾದ ಸುಗತ ಶ್ರೀನಿವಾಸ ರಾಜು ಅವರು ಆಡಿದ ಪ್ರೇರಣಾದಯಕ ನುಡಿಗಳಿಗಾಗಿ ಅವರಿಗೆ ಕೃತಜ್ಞತೆಗಳನ್ನು ಕುಮಾರಸ್ವಾಮಿ ಸಲ್ಲಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸೇರಿದಂತೆ ದೇವೇಗೌಡರ ಅಸಂಖ್ಯಾತ ಅಭಿಮಾನಿಗಳು ಈ ಸುಂದರ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಇಂತಹ ಸಾರ್ಥಕ ಕ್ಷಣಗಳಿಗೆ ಕಾರಣವಾದ ಹೆಚ್.ಡಿ. ದೇವೇಗೌಡ ಅಭಿನಂದನಾ ಸಮಿತಿ ಸದಸ್ಯರಿಗೆಲ್ಲ ದೇವೇಗೌಡರು ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

 

Share This Article
error: Content is protected !!
";