ಸಿದ್ದಗಂಗಾ ಮಠಕ್ಕೆ ಶಾಕ್ ನೀಡಿದ ರಾಜ್ಯ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ ವಿದ್ಯುತ್ ಬಿಲ್ ಅನ್ನು ಸಿದ್ದಗಂಗಾ ಮಠ ಭರಿಸುವಂತೆ ಕೆಐಡಿಬಿ ಅಭಿಯಂತರರು ಪತ್ರ ಬರೆದಿದ್ದಾರೆ. ಇದು ಸದ್ಯ ಚರ್ಚೆಗೆ ಗ್ರಾಸವಾಗುತ್ತಿದೆ. ಈ ಬಗ್ಗೆ ಸಿದ್ದಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದು
, ನೋಟಿಸ್ ನೀಡಿದ್ದು ದೊಡ್ಡ ವಿಚಾರವಲ್ಲ, ದೊಡ್ಡದು ಮಾಡಬೇಡಿ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಕೆಐಎಡಿಬಿಯಿಂದ ನಮ್ಮ ಮಠಕ್ಕೆ ನೋಟಿಸ್ ಬಂದಿರುವುದು ನಿಜ. ಇದನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಮಠದಿಂದ ಪತ್ರ ಬರೆದಿದ್ದೇವೆ. ಕೆಐಡಿಬಿಯವರು 70 ಲಕ್ಷ ರೂ. ಬಿಲ್ ಕಟ್ಟಲಾಗಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಪರಿಹಾರ ಮಾಡಿಕೊಡಿ ಎಂದಿದ್ದೆವು.

ಸಚಿವ ಎಂ.ಬಿ.ಪಾಟೀಲ್ ನೋಟಿಸ್ ಹಿಂಪಡೆಯುತ್ತೇವೆ ಅಂದರೆ ಸಂತಸ. ನೋಟಿಸ್ ಸಂಬಂಧ ಕ್ರಮಕೈಗೊಳ್ಳಿ ಎಂದು ನಾವು ಯಾರಿಗೂ ಹೇಳಿಲ್ಲ. ಸಿದ್ಧಗಂಗಾ ಮಠಕ್ಕೆ ನೋಟಿಸ್ ವಿಚಾರದಲ್ಲಿ ಸರ್ಕಾರ ಇತ್ಯರ್ಥ ಮಾಡುತ್ತೆ ಎಂದಿದ್ದಾರೆ.

ಸಿ.ಟಿ.ರವಿ ಕಿಡಿ- ಬೆಳಗಾವಿಯಲ್ಲಿ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಈ ಕುರಿತು ಹೇಳಿಕೆ ನೀಡಿದ್ದು, ಕರ್ನಾಟಕದಲ್ಲಿ ಮಠಗಳಿಗೆ ಕೊಡುವ ಪರಂಪರೆ ಇದೆ. ಆದರೆ ಮಠದಿಂದ ಕಿತ್ತುಕೊಳ್ಳುವುದು ಇದ್ಯಾವ ಸೀಮೆ ಪರಂಪರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಹಲವು ಮಠಗಳು ಅನ್ನದಾಸೋಹ, ಉಚಿತ ಶಿಕ್ಷಣ ನೀಡುತ್ತಿವೆ. ಹೀಗಾಗಿ ಮಠಗಳಿಗೆ ಕೊಡುವ ಪರಂಪರೆ ನಮ್ಮಲ್ಲಿದೆ. ಮಠದಿಂದಲೇ ಕಿತ್ತುಕೊಳ್ಳೋ ಸರ್ಕಾರ ಯಾವ ಪರಿಸ್ಥಿತಿಗೆ ಬಂದಿದೆ? ಹಾಗಾದರೆ ಇವರು ಬಿಕಾರಿಗಳಾಗಿದ್ದಾರಾ ಅಂತಾ ಪ್ರಶ್ನಿಸಿದ್ದಾರೆ.

ನಿಮಗೆ ನಾಚಿಕೆ ಆಗಲ್ವಾ? ನೋಟಿಸ್ ವಾಪಸ್ ಪಡೆದುಕೊಳ್ಳಿ. ಸುತ್ತಮುತ್ತ ಕೆರೆಗಳಿಗೆ ನೀರು ಹರಿಸಿದ್ದಕ್ಕೆ ಮಠಕ್ಕೆ ನೋಟಿಸ್ ಕೊಡುತ್ತಿರಾ? ಮಠಕ್ಕೆ ನೋಟಿಸ್ ಕೊಟ್ಟಿರುವ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಿ ಎಂದು ಕಿಡಿಕಾರಿದ್ದಾರೆ.

- Advertisement -  - Advertisement - 
Share This Article
error: Content is protected !!
";