ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಲ್ತುಳಿತದ ದುರ್ಘಟನೆಯಲ್ಲಿ 11 ಮಂದಿ ಅಮಾಯಕರ ಸಾವಿಗೆ ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆಯಾಗಿದ್ದರೂ ಬೆಂಗಳೂರು ನಗರದ ಪೊಲೀಸ್ ಕಮೀಷನರ್ ಬಿ ದಯಾನಂದ ಮತ್ತು ಇತರ ದಕ್ಷ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಸರ್ಕಾರ ಒಂದು ಕೆಟ್ಟ ಸಂದೇಶವನ್ನು ರಾಜ್ಯದ ಜನತೆಗೆ ನೀಡಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು.
ಹೊಸ ವರ್ಷದಾಚರಣೆ ಸಂದರ್ಭದಲ್ಲಿ ದಯಾನಂದ ಅವರೇ ನಗರದ ಪೊಲೀಸ್ ಕಮೀಷನರ್ ಅಗಿದ್ದರು, ಎಂಜಿ ರೋಡ್ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಲಕ್ಷಾಂತರ ಜನ ಸೇರಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದರು, ಅಂಥ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.