ಕೆಎಂಎಫ್‌ ಎಂಡಿ ಜಗದೀಶ್ ದಿಢೀರನೆ ವರ್ಗಾವಣೆ ಹಿಂದೆ ಪಟ್ಟಭದ್ರರ ಕೈವಾಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ ನಂದಿನಿಬ್ರ್ಯಾಂಡ್ ನ ಮಾರುಕಟ್ಟೆ ವಿಸ್ತರಿಸಲು ಅತ್ಯಂತ ಉತ್ಸಾಹ ಮತ್ತು ಬದ್ಧತೆ ತೋರಿದ್ದ ದಕ್ಷ ಅಧಿಕಾರಿ ಕೆಎಂಎಫ್‌ಎಂಡಿ ಎಂ.ಕೆ.ಜಗದೀಶ್ ಅವರನ್ನ ದಿಢೀರನೆ ವರ್ಗಾವಣೆ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿರ್ಧಾರ ಸಾರ್ವಜನಿಕರಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

ಈ ನಿರ್ಧಾರದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದೆಯಾ? ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ಪರಿಚಯಿಸಲು ಹೊರಟಿದ್ದ ಹೊಸ ಉತ್ಪನ್ನಗಳು ಮಾರುಕಟ್ಟೆಗೆ ಬರದಂತೆ ಖಾಸಗಿ ಕಂಪನಿಗಳ ಲಾಭಿಗೆ ಸರ್ಕಾರ ಮಣಿದಿದೆಯಾ? ಎಂದು ಪ್ರಶ್ನಿಸಿರುವ ಬಿಜೆಪಿ,

ಈ ಅನುಮಾನಗಳ ಕುರಿತಂತೆ ಮತ್ತು ನಂದಿನಿ ಬ್ರ್ಯಾಂಡ್ ನ ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ತರುವ ಯೋಜನೆಯಲ್ಲಿ ಏನಾದರೂ ಬದಲಾವಣೆ ಇದೆಯೇ ಎನ್ನುವ ಕುರಿತಂತೆ ಸಹಕಾರ ಸಚಿವ  ಕೆ.ಎನ್.ರಾಜಣ್ಣ  ಅವರು ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

 

 

- Advertisement -  - Advertisement - 
Share This Article
error: Content is protected !!
";