ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಕೊಟ್ಟಿಗೆಯಲ್ಲಿ ಕಟ್ಟಿದ ಜೋಡೆತ್ತುಗಳನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ಕೆರೆ ಕೊಂಡಾಪುರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಈ ಮೂಲಕ ರೈತನಿಗೆ ಲಕ್ಷಾಂತರ ರೂ.ನಷ್ಟವಾಗಿದೆ.
ಗ್ರಾಮದ ರೈತ ಕಾಡಪ್ಪ ಎಂಬುವರಿಗೆ ಸೇರಿದ ಜೋಡೆತ್ತುಗಳು ಇವಾಗಿವೆ. ಎತ್ತುಗಳನ್ನ ಕದ್ದು ಬುಲೆರೋ ಪಿಕಪ್ ವಾಹನದಲ್ಲಿ ಕಳ್ಳರು ಸಾಗಿಸಿರುವ ದೃಶ್ಯ ಸಿಸಿ ಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದೆ. ರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.