ನಾಲ್ವರು ವಿದ್ಯಾರ್ಥಿನಿಯರ ದಾರುಣ ಸಾವು

News Desk

ಚಂದ್ರವಳ್ಳಿ ನ್ಯೂಸ್, ಕಾರವಾರ:
ಮುರಾರ್ಜಿ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ದಾರುಣ ಸಾವು ಕಂಡ ಬಳಿಕ ಎಚ್ಚೆತ್ತುಕೊಂಡಿರುವ ಉತ್ತರ ಕನ್ನಡ ಜಿಲ್ಲಾಡಳಿತ
, ಪ್ರವಾಸಿಗರ ಸುರಕ್ಷತೆಯ ಹಿತದೃಷ್ಠಿಯಿಂದ ಮುರುಡೇಶ್ವರ ಬೀಚ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಿದೆ.

ಪ್ರವಾಸ ತೆರಳಿದ್ದ ವಿದ್ಯಾರ್ಥಿಗಳು-
ಕೋಲಾರ ಜಿಲ್ಲೆಯ ಮುಳಬಾಗಿಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಒಟ್ಟು 46 ವಿದ್ಯಾರ್ಥಿಗಳು ಹಾಗೂ 7 ಮಂದಿ ಶಿಕ್ಷಕರು ಮಂಗಳವಾರ ಮುರುಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು.

ಏಳು ವಿದ್ಯಾರ್ಥಿಗಳು ನೀರಿಗಿಳಿದಿದ್ದು ಆ ಪೈಕಿ ಓರ್ವ ವಿದ್ಯಾರ್ಥಿನಿ ಶ್ರವಂತಿ ಗೋಪಾಲಪ್ಪ(15) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಈ ವಿದ್ಯಾರ್ಥಿನಿ ಜೊತೆ ನಾಪತ್ತೆಯಾಗಿದ್ದ ದೀಕ್ಷಾ(15), ಲಾವಣ್ಯಾ(15), ಲಿಪಿಕಾ(15) ಅವರ ಮೃತ ದೇಹಗಳು ಬುಧವಾರ ಮುರುಡೇಶ್ವರ ದೇವಸ್ಥಾನದ ಹಿಂಬದಿಯ ಸಮುದ್ರತೀರದಲ್ಲಿ ಪತ್ತೆಯಾಗಿವೆ.

ಗಂಭೀರವಾಗಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವಿಕ್ಷಣಾ ಮತ್ತು ಇನ್ನೊಬ್ಬ ವಿದ್ಯಾರ್ಥಿನಿ ಇಲ್ಲಿನ ಆರ್‌ಎನ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಇನ್ನುಳಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಸಾಮಗ್ರಿಯನ್ನು ಮುಳಬಾಗಿಲಿಗೆ ಸುರಕ್ಷಿತವಾಗಿ ತಲುಪಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

ನಾಲ್ಕು ವಿದ್ಯಾರ್ಥಿನಿಯರ ಸಾವಿನ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಕಡಲತೀರದ ಸುತ್ತಮುತ್ತ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಹೆಚ್ಚುವರಿ ಪೊಲೀಸ್​ ಸಿಬ್ಬಂದಿಯನ್ನೂ ನಿಯೋಜಿಸಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

- Advertisement -  - Advertisement - 
Share This Article
error: Content is protected !!
";