ಕೌನ್ಸಿಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆ ಪ್ರಕ್ರಿಯೆ ಆರಂಭ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸುವ ಪ್ರಕ್ರಿಯೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಆರಂಭಿಸಿದೆ.

ಇದೇ ತಿಂಗಳ ಸೆ.10 ರಿಂದ ಸೆ.20ರ ವರೆಗೆ ಕಡ್ಡಾಯ ವರ್ಗಾವಣೆ ಕೌನ್ಸಿಲಿಂಗ್ ಹಾಗೂ ಸೆಪ್ಟೆಂಬರ್ 23 ಹಾಗೂ 24ರಂದು ಸಾಮಾನ್ಯ ಕೋರಿಕೆ ವರ್ಗಾವಣೆಗಳ ಕೌನ್ಸಿಲಿಂಗ್ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement - 

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಅಭಿವೃದ್ಧಿ ಆಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 & ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) ನಿಯಮಗಳು 2024ನ್ನು ರಚಿಸಿ ಅಧಿಸೂಚಿಸಲಾಗಿದೆ.

ಈ ನಿಯಮಗಳಿಗೆ ಸೂಕ್ತ ತಿದ್ದುಪಡಿಗಳನ್ನು ತಂದು, ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ಕಡ್ಡಾಯವಾಗಿ ವರ್ಗಾವಣೆಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

- Advertisement - 

ಪಟ್ಟಿ ಪ್ರಕಟ:
ವರ್ಗಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಆನ್​ಲೈನ್ ಮೂಲಕ ವಿಶೇಷ ಪ್ರಕರಣಗಳಡಿ 515 ಅರ್ಜಿಗಳು ಹಾಗೂ ಸಾಮಾನ್ಯ ಕೋರಿಕೆಯಡಿ 1215 ಅರ್ಜಿಗಳು ಸೇರಿ ಒಟ್ಟು 1730 ಅರ್ಜಿಗಳು ಬಂದಿವೆ ಎನ್ನಲಾಗಿದೆ.
ಪ್ರಸ್ತುತ ಖಾಲಿ ಹುದ್ದೆಗಳು
, ಕಡ್ಡಾಯ ವರ್ಗಾವಣೆಗಳ ರಾಜ್ಯವಾರು ಅಂತಿಮ ಪಟ್ಟಿ ಹಾಗೂ ವರ್ಗಾವಣೆಯಿಂದ ವಿನಾಯತಿಗಾಗಿ ಕೋರಿಕೆ ಸಲ್ಲಿಸಿದವರ ಪಟ್ಟಿಯನ್ನು https://rdprtransfer.karnataka.gov.in/ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ.

ಆಗಸ್ಟ್​ 29ರಂದು ವಿಶೇಷ ಪ್ರಕರಣಗಳ ಅಂತಿಮ ವರ್ಗಾವಣೆ ಆದ್ಯತಾ ಪಟ್ಟಿ ಬಿಡುಗಡೆ ಮಾಡಲಾಗಿದೆ. ಸೆ.1ರಂದು ಸಾಮಾನ್ಯ ಕೋರಿಕೆ ಮತ್ತು ಕಡ್ಡಾಯ ವರ್ಗಾವಣೆಯ ಅಂತಿಮ ಆದ್ಯತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.ಸೆ. 3 ರಿಂದ 8ರ ವರೆಗೆ ವಿಶೇಷ ಪ್ರಕರಣಗಳ ಮೊದಲ ಸುತ್ತಿನ ಕೌನ್ಸೆಲಿಂಗ್ ಹಾಗೂ 8 ರಂದು ವಿಶೇಷ ಪ್ರಕರಣಗಳ ಎರಡನೇ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ವರ್ಗಾವಣೆ ಪೂರ್ಣ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ
, ಪಂಚಾಯತಿ ಅಭಿವೃದ್ಧಿ ಅಧಿಕಾರಿ2024- 25ನೇ ಸಾಲಿನ ಆಯವ್ಯಯದಲ್ಲಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಅದರಂತೆ ಜೂನ್ 25ರಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-1 ಮತ್ತು ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಪಿಡಿಒ ವರ್ಗಾವಣೆ ಪ್ರಕ್ರಿಯೆಯನ್ನು ಆನ್​ಲೈನ್ ಕೌನ್ಸೆಲಿಂಗ್ ಮೂಲಕ ನಡೆಸುತ್ತಿದೆ. ಇದು ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ ಹೆಚ್ಚಿಸಲಿದೆ. ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಸಂಬಂಧಿಸಿದಂತೆ 31 ಜಿಲ್ಲೆಗಳಲ್ಲಿ ಅರ್ಹತೆ ಹೊಂದಿದ 1300 ನೌಕರರಿಗೆ ವರ್ಗಾವಣೆ ಆದೇಶಗಳನ್ನು ಸ್ಥಳದಲ್ಲೇ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

 

Share This Article
error: Content is protected !!
";