ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾನ್ಯ ಜನರಿಗೂ ವಿಮಾನಯಾನದ ಕನಸನ್ನು ಸಾಕಾರಗೊಳಿಸಿದ ಉಡಾನ್ ಯೋಜನೆಯನ್ನು ಇನ್ನೂ 3 ರಿಂದ 5 ವರ್ಷಗಳವರೆಗೆ ವಿಸ್ತರಿಸುವುದು ಇಂದಿನ ಅಗತ್ಯವಾಗಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಈ ಯೋಜನೆ ವಿಸ್ತರಣೆಯಾದಲ್ಲಿ, ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಪ್ರಯಾಣಿಸಲು ಸಾಧ್ಯವಾಗುವುದಲ್ಲದೆ, ಪ್ರಾದೇಶಿಕ ಸಂಪರ್ಕ ಬಲಗೊಂಡು ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಸಿಗಲಿದೆ.ಈ ನಿಟ್ಟಿನಲ್ಲಿ, ಯೋಜನೆಯನ್ನು ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.
ಇದರೊಂದಿಗೆ, ಕರ್ನಾಟಕದ ಸಣ್ಣ ವಿಮಾನ ನಿಲ್ದಾಣಗಳ ಅಭಿವೃದ್ಧಿ ಮತ್ತು ದೀರ್ಘಕಾಲೀನ ಸ್ಥಿರತೆಯನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದ್ದೇ ಆದ ಸ್ವತಂತ್ರ ‘ನಾಗರಿಕ ವಿಮಾನಯಾನ ನೀತಿ‘ ರೂಪಿಸಲು ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

