ಎನ್ ಡಿಎ ಮೈತ್ರಿಕೂಟದ 3 ಅಭ್ಯರ್ಥಿಗಳ ಗೆಲುವು ನಿಶ್ಚಿತ-ಎಂಡಿಎಲ್

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂದು ವಿಧಾನಪರಿಷತ್ ಮಾಜಿ ಸದಸ್ಯ
, ನೇಕಾರ ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಎಂಡಿ ಲಕ್ಷ್ಮೀನಾರಾಯಣ ತಿಳಿಸಿದರು.

- Advertisement - 

ತುರುವೇಕೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ 13 ರಂದು ನಡೆಯುವ ಉಪಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಬಂಗಾರು ಹನುಮಂತು ಹಾಗೂ ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

- Advertisement - 

ಸರ್ಕಾರದ ಜನವಿರೋಧಿ, ಅಭಿವೃದ್ಧಿ ವಿರೋಧಿ ನೀತಿಗೆ ಜನತೆ ಈ ಮೂರು ಉಪಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದು, ಕಾಂಗ್ರೆಸ್ ಸರ್ಕಾರ ಮುಖಭಂಗ ಅನುಭವಿಸಲಿದೆ ಎಂದು ಅವರು ಹೇಳಿದರು.

 

- Advertisement - 

 

Share This Article
error: Content is protected !!
";