ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ವಿಶ್ವದ ಆರೋಗ್ಯದ ರಾಯಭಾರಿ, ನಮ್ಮ ಶ್ರೇಷ್ಠ ಯೋಗ ಪದ್ಧತಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಯೋಗ ದಿನ‘ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ಜಗತ್ತಿಗೆ ಭಾರತದ ಶ್ರೇಷ್ಠ ಕೊಡುಗೆಯಾಗಿರುವ ಹಾಗೂ ದೇಹ ಮತ್ತು ಮನಸ್ಸಿಗೆ ನವಚೈತನ್ಯ ನೀಡಿ ನವೀಕರಿಸುವ ಯೋಗವನ್ನು, ನಮ್ಮೆಲ್ಲರ ದಿನಚರಿಯಲ್ಲಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ಶೈಲಿಯ ಸಂಕಲ್ಪ ಮಾಡಲಾಯಿತು ಎಂದು ವಿಜಯೇಂದ್ರ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಅಂತಾರಾಷ್ಟ್ರೀಯ ಯೋಗ ಶಿಕ್ಷಕ ರಾಘವೇಂದ್ರ ಪೈ, ಖ್ಯಾತ ಚಲನಚಿತ್ರ ಕಲಾವಿದರಾದ ಸುಧಾರಾಣಿ, ಕೋಮಲ್, ಗೀತಾ, ಸಾಹಿತಿ ವಿ.ನಾಗೇಂದ್ರ ಪ್ರಸಾದ್,
ರಾಜ್ಯ ಉಪಾಧ್ಯಕ್ಷೆ ಮಾಳವಿಕಾ, ಪ್ರಕೋಷ್ಠಕಗಳ ರಾಜ್ಯ ಸಂಯೋಜಕ ದತ್ತಾತ್ರಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಶರಣು ತಳ್ಳೀಕೆರೆ, ಲಕ್ಷ್ಮಿ ಅಶ್ವಿನ್ ಗೌಡ, ಜಿಲ್ಲಾಧ್ಯಕ್ಷ ಎಸ್.ಹರೀಶ್, ಸಪ್ತಗಿರಿ ಗೌಡ ಸೇರಿದಂತೆ ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

