ರಂಗಭೂಮಿ ಕಲಾವಿದ ಹಾಸ್ಯ ಚಿತ್ರನಟ ರಾಜು ತಾಳಿಕೋಟೆ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಂಗಭೂಮಿ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ.

ವಿಜಯಪುರದ ಸಿಂದಗಿ ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದ ರಾಜು ತಾಳಿಕೋಟೆ ಅವರು, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿ ಜನಮನ ಗೆದ್ದಿದ್ದರು.

- Advertisement - 

ಉಡುಪಿಯಲ್ಲಿ ಸಿನಿಮಾವೊಂದರ ಚಿತ್ರೀಕರಣ ಮುಗಿಸಿ ಕೋಣೆಯಲ್ಲಿ ಮಲಗಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ಕೂಡಲೇ ಅವರನ್ನು ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.

ರಾಜು ತಾಳಿಕೋಟೆ ಅವರು ವೃತ್ತಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ರಾಜು ತಾಳಿಕೋಟೆ ಅವರು ಮನಸಾರೆ, ಪಂಚರಂಗಿ, ಮತ್ತೊಂದು ಮದುವೆನಾ, ಮೈನಾ ಸಿನಿಮಾಗಳಲ್ಲಿ ನಟಿಸಿದ್ದಾರೆ.

- Advertisement - 

ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ ಖಾಸ್ಗತೇಶ್ವರನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.
ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅವರ ನಿಧನದ ಸುದ್ದಿ ತಿಳಿದು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.

 

Share This Article
error: Content is protected !!
";