ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಕಾಯಕ ತತ್ವದ ಶ್ರೇಷ್ಠತೆ ಸಾರಿದ ಹೆಮ್ಮೆಯ ಪರಂಪರೆಯೇ ಮಠಮಾನ್ಯಗಳ ಸಂಸ್ಕೃತಿ” ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ ವಿಜಯೇಂದ್ರ ಹೇಳಿದರು.
ಮೈಸೂರಿನ ಮಾದಹಳ್ಳಿಯಲ್ಲಿ ಶ್ರೀ ವೀರಭದ್ರೇಶ್ವರ, ಶ್ರೀ ಮಹದೇಶ್ವರ, ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ಸಿದ್ದಪ್ಪಾಜಿ ದೇವಸ್ಥಾನಗಳ ಜೀರ್ಣೋದ್ಧಾರ, ಅಂಕ ಸ್ಥಾಪನೆ ಹಾಗೂ ಕಳಶಾರೋಹಣ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇವರ ದರ್ಶನಾಶೀರ್ವಾದ ಪಡೆಯಲಾಯಿತು. ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ರಮಗಳು ಧರ್ಮ ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಲಿದ್ದು ಈ ಪರಮಪವಿತ್ರ ಕಾರ್ಯಗಳಿಗೆ ಎಲ್ಲರೂ ಕೈಗೊಡಿಸಬೇಕೆಂದು ವಿಜಯೇಂದ್ರ ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸುತ್ತೂರು ಶ್ರೀಮಠದ ಪರಮಪೂಜ್ಯ ಶ್ರೀ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಪರಮಪೂಜ್ಯ ಶ್ರೀ ಶಿವ ಸಿದ್ಧೇಶ್ವರ ಮಹಾಸ್ವಾಮಿಗಳು, ಪರಮಪೂಜ್ಯ ಮಹಾಂತ ಶ್ರೀಗಳು, ಪರಮಪೂಜ್ಯ ಶ್ರೀ ಚನ್ನಬಸವ ಶ್ರೀಗಳು, ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೇರಿದಂತೆ ವಿವಿಧ ಮಠಗಳ ಪರಮಪೂಜ್ಯರು, ಹರಗುರು ಚರಮೂರ್ತಿಗಳು ಹಾಗೂ ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.