ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸದಸ್ಯ ನಾಸಿರ್ ಹುಸೈನ್ ಅವರು ರಾಜ್ಯ ಸಭಾ ಚುನಾವಣೆಯಲ್ಲಿ ಗೆದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರ ಮೇಲೆ ಪೊಲೀಸರು ದೋಷಾರೋಪಣಾ ಪಟ್ಟಿ ದಾಖಲು ಮಾಡಲು ಮೀನಾ ಮೇಷ ಎಣಿಸುತ್ತಿರುವುದು ನಿಜಕ್ಕೂ ಖಂಡನೀಯ ಎಂದು ಬಿಜೆಪಿ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ.
ದೇಶದ ವಿರುದ್ಧ ಯಾರೇ ಮಾತಾಡಿದರೂ ಅವರ ಮೇಲೆ ಮುಲಾಜಿಲ್ಲದೆ ಕೇಸು ದಾಖಲಿಸಿ ಶಿಕ್ಷೆ ಕೊಡಿಸಬೇಕಾದದ್ದು ಪೊಲೀಸರ ಕರ್ತವ್ಯ. ಆದರೆ ಪ್ರಕರಣ ನಡೆದು 9 ತಿಂಗಳಾದರೂ ದೋಷಾರೋಪಣಾ ಪಟ್ಟಿ ಸಲ್ಲಿಸದೆ ಇರುವುದು ಯಾರ ಒತ್ತಡ, ಪ್ರಭಾವದ ಮೇಲೆ ಎಂದು ಪೊಲೀಸರು ಹೇಳಬೇಕು ಎಂದು ಯತ್ನಾಳ್ ಆಗ್ರಹ ಮಾಡಿದ್ದಾರೆ.
ಪ್ರಕರಣದಲ್ಲಿ ಎಲ್ಲರ ಹೇಳಿಕೆ ಪಡೆದು ಕೂಡಲೇ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಹಾಗೂ ದೇಶ ವಿರೋಧಿ ಘೋಷಣೆ ಕೂಗಿದವರಿಗೆ ಶಿಕ್ಷೆ ಆಗುವಂತೆ ಪೊಲೀಸರು ನೋಡಿಕೊಳ್ಳಬೇಕು ಎಂದು ಅವರು ಆಗ್ರಹ ಮಾಡಿದ್ದಾರೆ.