ಸಿಎಂ-ಡಿಸಿಎಂ ಮಧ್ಯ ಯಾವುದೇ ಭಿನ್ನಾಭಿಪ್ರಾಯವಿಲ್ಲ-ಸುರ್ಜೆವಾಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿಯವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಈ ಆರೋಪ ಮಾಡುತ್ತಿದ್ದಾರೆ. ಕೆಲ ಮಾಧ್ಯಮಗಳಿಂದ ಈ ಗೊಂದಲ ಸೃಷ್ಟಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ಈ ವಿಚಾರ ಪ್ರಸ್ತಾಪಿಸಿ ಬಿಜೆಪಿಗೆ ತರಾಟೆ ತೆಗೆದುಕೊಂಡು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 58 ಸಾವಿರ ಕೋಟಿ ರೂಗಳ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ.

ಇವುಗಳ ಲಾಭ ಜನತೆಗೆ ಸಿಗುತ್ತಿದೆ. ಇವು ದೇಶದ ದೊಡ್ಡ ಯೋಜನೆಗಳೆನಿಸಿವೆ. ಇವುಗಳ ಯಶಸ್ಸಿನಿಂದ ಬಿಜೆಪಿ ಹತಾಶೆಗೊಂಡಿದೆ. ಇದನ್ನು ಮರೆಮಾಚಲು ಕಾಂಗ್ರೆಸ್​ನಲ್ಲಿ ಇಲ್ಲದ ಒಡಕನ್ನು ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.

ಕರ್ನಾಟಕ ಬಿಜೆಪಿಯಲ್ಲಿ ಬೇರೆ ಬೇರೆ ಬಣಗಳಿವೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಬಣ ಇದೆ. ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳರದ್ದು ಬಣ ಇದೆ. ಮತ್ತೊಂದೆಡೆ ಆರ್ ಅಶೋಕ್ ಅವರ ಬಣ ಇದೆ. ಮಗದೊಂದೆಡೆ ಅಶ್ವತ್ಥ ನಾರಾಯಣ ಅವರ ಬಣ ಇದೆ ಎಂದು ಬಿಜೆಪಿ ವಿರುದ್ಧ ಸುರ್ಜೆವಾಲ ವಾಗ್ದಾಳಿ ಮಾಡಿದರು.

ವಿಜಯೇಂದ್ರ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸುತ್ತಿದ್ದಾರೆ. ಯತ್ನಾಳರಿಗೆ ರಮೇಶ್ ಜಾರಕಿಹೊಳಿ ಬೆಂಬಲ ನೀಡುತ್ತಿದ್ದಾರೆ. ಬಿಜೆಪಿಯ ಆಂತರಿಕ ಕಿತ್ತಾಟಕ್ಕೆ ಜೆಡಿಎಸ್ ಕೂಡ ಬೆಂಬಲ ನೀಡುತ್ತಿದೆ. ಈ ಎಲ್ಲಾ ಹತಾಶೆಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ವಿರುದ್ಧ ಬಿಜೆಪಿ ಇಲ್ಲದ ಆರೋಪ ಮಾಡುತ್ತಿದೆ ಎಂದು ರಣದೀಪ್ ಸುರ್ಜೆವಾಲ ಹೇಳಿದರು.

- Advertisement -  - Advertisement - 
Share This Article
error: Content is protected !!
";