ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸ ಗ್ಯಾರಂಟಿಗಳ ಬಗ್ಗೆ ಸಿ.ಎಲ್.ಪಿ ಯಲ್ಲಿ ಚರ್ಚೆಯೇ ಆಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಚಾರ್ಚ್ ಶೀಟ್ ನೋಡಿಲ್ಲ:
ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್ಐಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಚಾರ್ಚ್ ಶೀಟ್ ನ್ನು ಇನ್ನೂ ನೋಡಿಲ್ಲ ಎಂದರು.
ಪ್ರಧಾನಿಗಳಿಗೆ ಪತ್ರ:
ತೊಗರಿಬೇಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಹೈ ಕಮಾಂಡ್ ನಿರ್ಧಾರವೇ ಅಂತಿಮ:
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುವರೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಸೂಚನೆಯೇ ಅಂತಿಮ ಎಂದರು.

