ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರವು ಬೆಳಗಾವಿಯ ಚಳಿಗಾಲದ ಅಧಿವೇಶನವನ್ನು ಸಂಪೂರ್ಣ ವ್ಯರ್ಥ ಮಾಡುತ್ತಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳು ಸೇರಿದಂತೆ ಸಚಿವರೂ ತಯಾರಿಲ್ಲ ಎಂದು ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರ ಸಾವು, ಶಿಶುಗಳ ಮರಣ ಇದರ ಕುರಿತು ಚರ್ಚೆಗೂ ಸಿದ್ಧರಿಲ್ಲ. ಸದನದ ದಿಕ್ಕು ತಪ್ಪಿಸುವ ಕೆಲಸವನ್ನಷ್ಟೇ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.