ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಮಿತಿ ಮೀರುತ್ತಿರುವ ಓಲೈಕೆ ರಾಜಕಾರಣದ ಪರಿಣಾಮ ಗಣೇಶೋತ್ಸವವೂ ನಿರ್ವಿಘ್ನವಾಗಿ ನಡೆಯಲಿಲ್ಲ, ದುರ್ಗಾ ಪೂಜೆಯೂ ಶಾಂತವಾಗಿ ನಡೆಯಲು ಬಿಡುತ್ತಿಲ್ಲ, ಮತಾಂಧರ ಅಟ್ಟಹಾಸಕ್ಕೆ ಕೊನೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಹರಿಹಾಯ್ದಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ತಾಯಿ ದುರ್ಗಾದೇವಿ ಮೂರ್ತಿ ವಿಸರ್ಜನೆ ಮುಗಿಸಿ ಬರುತ್ತಿದ್ದ ಅಮಾಯಕ ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ರಾಕ್ಷಸೀ ಪ್ರವೃತ್ತಿ ಮೆರೆದಿರುವ ದುರುಳರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ಅವರು ಆಗ್ರಹಿಸಿದ್ದಾರೆ.