ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಎಂ.ಕೆ.ಹಟ್ಟಿಯ ಜನನಾಡಿ ಚಾರಿಟಬಲ್ ಟ್ರಸ್ಟ್ ಹಾಗೂ ಜಿಲ್ಲಾಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಲ್ಲಿ ಆರೋಗ್ಯದ ಮಹತ್ವ ಕುರಿತು ಜಾಗೃತಿಯನ್ನು ಮಠದಕುರುಬರಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜನನಾಡಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಅನಿಲ್‌ಕುಮಾರ್ ಎಂ.ಎನ್. ಮಾತನಾಡಿ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಬೇರೆ ಯಾವುದೂ ಇಲ್ಲ. ಆಧುನಿಕ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಿಂದ ನಾನಾ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಮನೆಯ ಸುತ್ತಲೂ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ಅರಿವು ಮೂಡಿಸಿದರು.
ಜನನಾಡಿ ಚಾರಿಟಬಲ್ ಟ್ರಸ್ಟ್ ಉಪಾಧ್ಯಕ್ಷ ಗಣೇಶ್ ಎಲ್. ಕಾರ್ಯದರ್ಶಿ ಗಣೇಶ್ ಸಿ. ಮಧು ಹೆಚ್. ಸದಸ್ಯರುಗಳಾದ ನಾಗರಾಜ್, ಮಂಜುನಾಥ್, ಅರುಣ್, ಅಜಯ್,
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಟಿ.ರಾಜನಾಯ್ಕ, ಬಿ.ಮೂಗಪ್ಪ, ಜಬ್ಬಾರ್, ಆಶಾ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

