ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಮಾಹಿತಿ ಇಲ್ಲ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬಿಜೆಪಿ ನಾಯಕ ಬಿ.ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ ರಾಮುಲು ವಿಷಯ ಕುರಿತು ಸಂಪೂರ್ಣ ಮಾಹಿತಿ ಪಡೆಯುವೆ. ಟಿವಿಯಲ್ಲಿ ಬರುತ್ತಿರುವ ಸುದ್ದಿ ನೋಡಿದ್ದೇನಷ್ಟೇ. ಪೂರ್ಣ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

- Advertisement - 

ಫೈನಾನ್ಸ್ ಕಿರುಕುಳ ಕುರಿತು ಪ್ರತಿಕ್ರಿಯಿಸಿದ ಸತೀಶ ಜಾರಕಿಹೊಳಿ, ಸಾಕಷ್ಟು ಕಡೆ ಖಾಸಗಿ ಫೈನಾನ್ಸ್ ನವರು ಕಿರುಕುಳ ನೀಡುವ ವರದಿಗಳು ಬರುತ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ. ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ‌ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಆದರೆ, ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ.

ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ. ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು ಸಭೆ ನಡೆಸಿದ್ದೇನೆ. ಎರಡು ತಿಂಗಳ‌ಸಮಯ ಕೇಳಿದ್ದೇವೆ, ಏನಾದರೂ ಅದಕ್ಕೆ ಪರಿಹಾರ ಹುಡುಕುತ್ತೇವೆ. ಒಂದು ತಿಂಗಳಲ್ಲಿ ಏನು ಸಾಧ್ಯವೋ ಅದಕ್ಕೆ ಪರಿಹಾರಕ್ಕೆ ಮಾಡುತ್ತೇವೆ. ಶಿರೂರಿನಲ್ಲಿ ಕೂಡ ಮಹಿಳೆ ಆತ್ಮಹತ್ಯೆ ಪ್ರಕರಣ ನಡೆದಿದೆ. ಸಂಬಂಧಪಟ್ಟವರಿಗೆ ಈ ಬಗ್ಗೆ ದೂರು ಕೊಡಲು ತಿಳಿಸಿರುವೆ ಎಂದು ಜಾರಕಿಹೊಳಿ ತಿಳಿಸಿದರು.

- Advertisement - 

 ಖಾಸಗಿ ಫೈನಾನ್ಸ್​ನವರು ಮಧ್ಯವರ್ತಿಗಳ ಜೊತೆಗೆ ಭಾಗಿಯಾಗಿದ್ದಾರೆ ಎಂಬ ಆರೋಪ ಕುರಿತು ಪೊಲೀಸ್ ತನಿಖೆಗೆ ಸೂಚನೆ ಕೊಟ್ಟಿದ್ದೇನೆ. ವರದಿ ಬಂದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ತಾರಿಹಾಳದಲ್ಲಿ‌ಹಸುಗೂಸು ಸಮೇತ ಬಾಣಂತಿಯನ್ನು ಮನೆಯಿಂದ ಹೊರಹಾಕಿ ಮನೆ ಹರಾಜಿಗಿಟ್ಟ ಪ್ರಕರಣ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸತೀಶ ಜಾರಕಿಹೊಳಿ, ಕುಟುಂಬಸ್ಥರು ದೂರು ಕೊಟ್ಟರೆ ಫೈನಾನ್ಸ್​ನವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಸತೀಶ ಜಾರಕಿಹೊಳಿ ಹೇಳಿದರು.

 

 

Share This Article
error: Content is protected !!
";