ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡುವ ವಿಚಾರದಲ್ಲಿ ಸಿಎಂ ಮತ್ತು ಗೃಹ ಸಚಿವರ ನಡುವೆ ಸಮನ್ವಯ ಮತ್ತು ಹೊಂದಾಣಿಕೆ ಇಲ್ಲ ಎಂಬುದು ಜಗಜ್ಜಾಹೀರಾಗಿದೆ ಜೆಡಿಎಸ್ ದೂರಿದೆ.
ನಕ್ಸಲ್ ನಿಗ್ರಹ ಪಡೆಯು ಚಾಲ್ತಿಯಲ್ಲಿದೆ ಮತ್ತು ಅದನ್ನು ಸದ್ಯಕ್ಕೆ ಮೊಟಕುಗೊಳಿಸುವುದಿಲ್ಲ ಎಂದು 2025ರ ಮಾರ್ಚ್ 6ರಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸದನದಲ್ಲೇ ಲಿಖಿತ ಉತ್ತರ ನೀಡಿದ್ದಾರೆ.
ಆದರೆ, ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಘೋಷಿಸಿದ್ದಾರೆ. ನಕ್ಸಲ್‌ನಿಗ್ರಹ ವಿಷಯದಲ್ಲಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ಪರಸ್ಪರ ವಿಭಿನ್ನ ದೃಷ್ಟಿಕೋನ “ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು” ಎಂಬಂತಾಗಿದೆ ಎಂದು ಜೆಡಿಎಸ್ ದೂರಿದೆ.