ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲ, ಕನ್ನಡದಲ್ಲೇ ನಿಮ್ಮತನ ಉಳಿದಿರುವುದು ಪ್ರಶಂಸನೀಯ-ಸಿಎಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆ, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನ ಉಳಿಸಿಕೊಂಡಿರುವುದು ಪ್ರಶಂಸನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶದ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ.

- Advertisement - 

ಬ್ಯಾರಿ ಸಮುದಾಯದವರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುತ್ತಿರುವುದು ಸ್ವಾಗತಾರ್ಹ. ಒಂದು ಕಾಲದಲ್ಲಿ ಮಹಿಳೆಯರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು, ಹೆಣ್ಣು ಮಕ್ಕಳು ವಿದ್ಯಾವಂತರಾಗುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿರುವುದು ಒಳ್ಳೆಯ ಬೆಳವಣಿಗೆ. ಲಿಂಗ ತಾರತಮ್ಯ ಹೋಗಲಾಡಿಸಲು ವಿದ್ಯಾಭ್ಯಾಸ ಅವಶ್ಯಕ.
ಎಲ್ಲರೂ ಜಾತ್ಯತೀತರಾಗಿರುವುದು ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಸ್ಪರ ಪ್ರೀತಿಸಬೇಕು‌ಮನುಷ್ಯರಾಗಿ ಬಾಳಬೇಕು ಎಂದು ಎಲ್ಲಾ ಧರ್ಮಗಳೂ ಹೇಳುತ್ತವೆ. ಧರ್ಮವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ವ್ಯಾಖ್ಯಾನಿಸುವುದು ಸರಿಯಲ್ಲ.

ಬ್ಯಾರಿ ಭವನ ನಿರ್ಮಾಣಕ್ಕೆ 5 ಕೋಟಿ ರೂ ನೀಡಿದ್ದೆ. ಬ್ಯಾರಿ ಭಾಷೆ, ಕಲೆ ಉಳಿಸಲು ಸರ್ಕಾರ ನೆರವು ನೀಡಲಿದೆ. ಮಂಗಳೂರು ಬ್ಯಾರಿ ಅಕಾಡೆಮಿಗೆ 3 ಕೋಟಿ, ಹಜ್ ಭವನಕ್ಕೆ 10 ಕೋಟಿ ಅನುದಾನ ನೀಡಲಾಗಿದೆ.

- Advertisement - 

ಬ್ಯಾರಿ ಸಮುದಾಯಕ್ಕೆ ಸೇರಿದ ಯು. ಟಿ.ಖಾದರ್ ವಿಧಾನಸಭಾಧ್ಯಕ್ಷರಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಾ, ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುತ್ತಿದ್ದಾರೆ. ಇಡೀ ಬ್ಯಾರಿ ಸಮುದಾಯ ಇನ್ನಷ್ಟು ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಸಬಲರಾಗಲಿ‌ಎಂದು ಹಾರೈಸುತ್ತೇನೆ.

 

Share This Article
error: Content is protected !!
";