ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂಡೂರು ಉಪಚುನಾವಣೆಯ ಅಂಗವಾಗಿ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಸಂದರ್ಭದಲ್ಲಿ ಆಯೋಜಿಸಿದ್ದ ಬೃಹತ್ ರೋಡ್ ಶೋ ನಡೆಸಿ ಮತ ಯಾಚನೆ ಮಾಡಲಾಯಿತು.
ಜನವಿರೋಧಿ ಹಾಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ನಿಟ್ಟಿನಲ್ಲಿ ಜನಸಾಮಾನ್ಯರು ಸಂಕಲ್ಪತೊಟ್ಟಿದ್ದು ನಮ್ಮ ಅಭ್ಯರ್ಥಿ ದಾಖಲೆಯ ಮಾತುಗಳಿಂದ ದಿಗ್ವಿಜಯ ಸಾಧಿಸುವ ವಿಶ್ವಾಸ ಮೂಡಿಸಿತು.
ಗೆಲುವಿಗೆ ಕಾರ್ಯತಂತ್ರ-
ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಸಂಡೂರಿನಲ್ಲಿ ಪಕ್ಷದ ಪ್ರಮುಖರು ಹಾಗೂ ಪದಾಧಿಕಾರಿಗಳ ಸಭೆ ನಡೆಸಲಾಯಿತು.
ಪಕ್ಷದ ಅಭ್ಯರ್ಥಿಯ ಗೆಲುವಿನ ಕಾರ್ಯತಂತ್ರಗಳು ಹಾಗೂ ದಾಖಲೆಯ ಪ್ರಮಾಣದಲ್ಲಿ ಮತ ಗಳಿಕೆಯ ಮೂಲಕ ದೊಡ್ಡ ಪ್ರಮಾಣದ ಅಂತರಗಳಿಂದ ಗೆಲ್ಲಿಸಲು ವಿರಮಿಸದೇ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು.
ಈ ಸಂದರ್ಭದಲ್ಲಿ ಎನ್.ಡಿ.ಎ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವರಾದ ಗಾಲಿ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು, ಮಾಜಿ ಕೇಂದ್ರ ಸಚಿವರಾದ ಭಗವಂತ್ ಖೂಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್,
ಮಾಜಿ ಶಾಸಕರಾದ ಸೋಮಶೇಖರ್ ರೆಡ್ಡಿ, ಕಂಪ್ಲಿ ಸುರೇಶ್ ಬಾಬು, ರಾಜ್ಯ ಕಾರ್ಯದರ್ಶಿ ದಿವಾಕರ್, ಶರಣು ತಳ್ಳೀಕೇರಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಮತದಾರ ಬಂಧುಗಳು ಭಾಗವಹಿಸಿದ್ದರು.