ಚಂದ್ರವಳ್ಳಿ ನ್ಯೂಸ್, ಯಾದಗಿರಿ:
ಇದೇ ಡಿಸೆಂಬರ್ 31ರಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಲಿದೆ ಎಂದು ಯಾದಗಿರಿ ನಗರದಲ್ಲಿ ಪ್ರಯಾಣಿಕರಿಗೆ ಸಾರಿಗೆ ನೌಕರರಿಂದ ಕರ ಪತ್ರ ಹಂಚಿಕೆ ಮಾಡಲಾಗಿದೆ.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಕರಪತ್ರ ಹಂಚಿಕೆ ಮಾಡಲಾಗಿದೆ.
ಡಿ. 31 ರಿಂದ ಬಸ್ಗಳ ಸಂಚಾರವಿಲ್ಲ ಪ್ರಯಾಣಿಕರು ಸಹಕರಿಸಬೇಕೆಂದು ಪ್ರತಿಭಟನಾಕಾರರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.