ಪರಿಕೆ ಹಿಡಿದು ಕಸ ಗುಡಿಸಿದ ಸಂಸದ ಕಾರಜೋಳ, ಮಾಜಿ ಶಾಸಕ ತಿಪ್ಪಾರೆಡ್ಡಿ!!!

News Desk

ಪರಿಕೆ ಹಿಡಿದು ಕಸ ಗುಡಿಸಿದ ಸಂಸದ ಕಾರಜೋಳ, ಮಾಜಿ ಶಾಸಕ ತಿಪ್ಪಾರೆಡ್ಡಿ!!!
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದೇಶದಲ್ಲಿರುವ ೧೪೦ ಕೋಟಿ ಜನರು ದೇಶಭಕ್ತರಾಗಬೇಕು. ದೇಶದ್ರೋಹಿಗಳಾಗಬಾರದೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ದೇಶದ ಪ್ರಧಾನಿ ನರೇಂದ್ರಮೋದಿರವರ ಜನ್ಮದಿನದ ಅಂಗವಾಗಿ ಜೆಸಿಆರ್.ನಲ್ಲಿರುವ ಗಣಪತಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸೋಮವಾರದಿಂದ ಅ.೨ ರವರೆಗೆ ನಿರಂತರವಾಗಿ ಸೇವಾ ಸಪ್ತಾಹ ಕಾರ್ಯಕ್ರಮಗಳು ನಡೆಯುತ್ತವೆ. ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾ ಮಾಡಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವವರ ಅಮೂಲ್ಯವಾದ ಜೀವ ಉಳಿಸಬೇಕು. ಸ್ವಚ್ಚ ಭಾರತ್ ಅಡಿ ದೇಶದಲ್ಲಿ ಹತ್ತು ಕೋಟಿಗೂ ಹೆಚ್ಚು ಶೌಚಾಲಯಗಳನ್ನು ಕಟ್ಟಿಸಲಾಗಿದೆ. ಪ್ರಥಮ ಬಾರಿಗೆ ನರೇಂದ್ರಮೋದಿ ದೇಶದ ಪ್ರಧಾನಿಯಾದಾಗ ಕೆಂಪುಕೋಟೆ ಮೇಲೆ ನಿಂತು ಭಾಷಣ ಮಾಡುತ್ತ ದೇವಾಲಯಗಳಿಗಿಂತ ಶೌಚಾಲಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಭಾಷಣ ಮಾಡಿದ್ದರು. ಯಾವುದೇ ಜಾತಿ ಧರ್ಮದವರಾಗಲಿ ಭಾರತದ ವಿರುದ್ದ ಘೋಷಣೆಗಳನ್ನು ಕೂಗುವುದು, ಧ್ವಜ ಪ್ರದರ್ಶಿಸುವುದಾಗಲಿ ಅಂತಹವರ ವಿರುದ್ದ ಕ್ರಮ ಕೈಗೊಳ್ಳಲು ಕಾನೂನಿನಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ಪ್ರಧಾನಿ ನರೇಂದ್ರಮೋದಿರವರ ಹುಟ್ಟುಹಬ್ಬದ ಪ್ರಯುಕ್ತ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೇವಾ ಸಪ್ತಾಹ ನಡೆಯಲಿದೆ. ಬಸವೇಶ್ವರ ಆಸ್ಪತ್ರೆಯಲ್ಲಿ ಶುಕ್ರವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಕ್ಕೆ ಮುಂದಾಗುವಂತೆ ಮನವಿ ಮಾಡಿದರು.

ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಬಿಜೆಪಿ.ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ವಕ್ತಾರ ನಾಗರಾಜ್‌ಬೇದ್ರೆ ಇನ್ನು ಅನೇಕರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -  - Advertisement -  - Advertisement - 
Share This Article
error: Content is protected !!
";