ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೆ.ಪಿ.ಸಿ.ಸಿ ಉಪಾಧ್ಯಕ್ಷ ಹಾಗೂ ಮಾಜಿ ಅಧ್ಯಕ್ಷರು, ಕೌಶಲ್ಯ ಅಭಿವೃದ್ಧಿ ನಿಗಮ ಮುರಳೀಧರ ಹಾಲಪ್ಪ ಇವರು ಚಿತ್ರದುರ್ಗಕ್ಕೆ ಸೋಮವಾರ ಆಗಮಿಸಿ ಗಾಂಧಿ ನಡಿಗೆ ಸಿದ್ಧತೆಗಳ ಪೂರ್ವಭಾವಿ ಸಭೆ ನಡೆಸಲಿದ್ದಾರೆ.
ಸೃ30 ರಂದು ಸೋಮವಾರ ಮಧ್ಯಾಹ್ನ 03:30ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.
ಕೆ.ಪಿ.ಸಿ.ಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಗಾಂಧಿ ಜಯಂತಿಯನ್ನು “ಗಾಂಧಿ ನಡಿಗೆ 100 ವರ್ಷ” ಎಂಬ ಘೋಷಣೆಯೊಂದಿಗೆ ಅದ್ದೂರಿಯಾಗಿ ಆಚರಿಸಬೇಕಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಯಶಸ್ವಿಗೊಳಿಸಲು ಅವರು ಕೋರಿದ್ದಾರೆ.
ಸಭೆಯಲ್ಲಿ ಕೆ.ಪಿ.ಸಿ.ಸಿ ರವರ ಆಪ್ತ ಕಾರ್ಯದರ್ಶಿ, ಕೆಪಿಸಿಸಿ ಕಾರ್ಯಾಧ್ಯಕ್ಷ, ಉಸ್ತುವಾರಿ ಸಚಿವರು ಹಾಗೂ ಹಾಲಿ / ಮಾಜಿ ಶಾಸಕರು, ಸ್ಪರ್ಧಿತ ಜನಪ್ರತಿನಿಧಿಗಳು, ಹಾಲಿ / ಮಾಜಿ ನಿಗಮ ಮಂಡಳಿ ಅಧ್ಯಕ್ಷರುಗಳು, ಜಿಲ್ಲಾಧ್ಯಕ್ಷರು / ಕಾರ್ಯಾಧ್ಯಕ್ಷರು / ಬ್ಲಾಕ್ ಅಧ್ಯಕ್ಷರುಗಳು / ಎಲ್ಲಾ ಘಟಕಗಳ ಅಧ್ಯಕ್ಷರುಗಳು / ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಪಾಲ್ಗೊಳ್ಳಲಿದ್ದಾರೆಂದು ಮುರುಳೀಧರ ಹಾಲಪ್ಪ ತಿಳಿಸಿದ್ದಾರೆ.