Ad imageAd image

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಈ ಪಂಚಮಂತ್ರ ಅಗತ್ಯ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಇಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನದ ಅಂಗವಾಗಿ ಚಿಕ್ಕಮಗಳೂರಿನ ತೇಗೂರುರಿನಲ್ಲಿ ಬುದ್ಧವಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕುವೆಂಪು ಸ್ಮರಣೆಕಾರ್ಯಕ್ರಮದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿ, ಶುಭ ಹಾರೈಸಿದರು.

ಮನುಜಮತ, ವಿಶ್ವಪಥ, ಸರ್ವೋದಯ, ಸಮನ್ವಯ, ಪೂರ್ಣದೃಷ್ಟಿ ಈ ಪಂಚಮಂತ್ರ ಇನ್ನು ಮುಂದಿನ ದೃಷ್ಟಿಯಾಗಬೇಕಾಗಿದೆ. ಅಂದರೆ, ನಮಗೆ ಇನ್ನು ಬೇಕಾದುದು”ಮನುಜಮತ” ಎಂದು ರವಿ ತಿಳಿಸಿದ್ದಾರೆ.

ಆ ಪಥ ಈ ಪಥ ಅಲ್ಲ; “ವಿಶ್ವಪಥ”. ಆ ಒಬ್ಬರ ಈ ಒಬ್ಬರ ಉದಯ ಮಾತ್ರವಲ್ಲ; ಸರ್ವರ ಸರ್ವಸ್ತರದ ಉದಯ ಅದುವೇ “ಸರ್ವೋದಯ”. ಪರಸ್ಪರ ವಿಮುಖವಾಗಿ ಸಿಡಿದು ಹೋಗುವುದಲ್ಲ; “ಸಮನ್ವಯ” ಗೊಳ್ಳುವುದು. ಮಿತಮತದ ಆಂಶಿಕ ದೃಷ್ಟಿಯಲ್ಲ; ಭೌತಿಕ ಪಾರಮಾರ್ಥಿಕ ಎಂಬ ಭಿನ್ನ ದೃಷ್ಟಿಯಲ್ಲ; ಎಲ್ಲವನ್ನು ಭಗವದ್ ದೃಷ್ಟಿಯಿಂದ ಕಾಣುವ “ಪೂರ್ಣದೃಷ್ಟಿ” ಎಂದು ಸಿಟಿ ರವಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಬಿ ಬಿ ನಿಂಗಯ್ಯ, ದಲಿತ ಸಂಘಟನೆಯ  ಮುಖಂಡರುಗಳಾದ ಮರ್ಲೆ ಅಣ್ಣಯ್ಯ, ಶ್ರೀನಿವಾಸ್, ಹೊನ್ನೇಶ್, ಬಿಜೆಪಿ ಮುಖಂಡರುಗಳಾದ ಕುರುವಂಗಿ ವೆಂಕಟೇಶ್, ಹಂಪಯ್ಯ ಮುಂತಾದದವರು ಉಪಸ್ಥಿತರಿದ್ದರು.

 

 

- Advertisement -  - Advertisement - 
Share This Article
error: Content is protected !!
";