ಜಾತಿಗಣತಿ ವಿರೋಧ ಮಾಡುವವರು ಕಾರಣ ಕೊಡಬೇಕು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅನಗತ್ಯವಾಗಿ ಟೀಕೆ, ಆರೋಪ ಮಾಡುವುದು ಸರಿಯಲ್ಲ. ಸರ್ಕಾರದ ಅಡಿಯಲ್ಲಿ ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರು, ಶಿಕ್ಷಕರು, ಜಿಲ್ಲಾಧಿಕಾರಿಗಳು, ತಹಸೀಲ್ದಾರ್‌ಗಳು ಸೇರಿ ಅನೇಕರು ಕಾರ್ಯನಿರ್ವಹಿಸಿದ್ದಾರೆ. ಅವರ ಶ್ರಮವನ್ನು ಗೌರವಿಸಬೇಕು ಎಂದು ಎಚ್.ಆಂಜನೇಯ ಒತ್ತಾಯಿಸಿದರು.

ಅವರು ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವರದಿ ಬಹಿರಂಗಗೊಂಡ ಬಳಿಕ ವಿರೋಧ ಮಾಡುವವರು ತಪ್ಪುಗಳನ್ನು ಗುರುತಿಸಿ ಹೇಳಲಿ. ಇಂತಹ ಪ್ರದೇಶದಲ್ಲಿ ಸರ್ವೇ ಆಗಿಲ್ಲ ಎಂದು ಹೇಳಲಿ.

ಆಗ ಅದು ಸತ್ಯವೇ ಅಗಿದ್ದರೇ ಆ ಪ್ರದೇಶದಲ್ಲಿ ಮರು ಸಮೀಕ್ಷೆ ನಡೆಸಲು ಸರ್ಕಾರಕ್ಕೆ ಒತ್ತಡ ಹಾಕೋಣಾ. ಈ ಸಂಬಂಧ ನಾವೆಲ್ಲರೂ ಬೆಂಬಲವಾಗಿ ನಿಲ್ಲುತ್ತೇವೆ ಎಂದರು. ವರದಿ ಬಹಿರಂಗಕ್ಕೆ ಮುನ್ನವೇ ಅನಗತ್ಯವಾಗಿ ವಿರೋಧ ಮಾಡಿದರೇ ನಾವು ಸಹಿಸುವುದಿಲ್ಲ.

ಅತ್ಯಂತ ವೈಜ್ಞಾನಿಕವಾಗಿ ತಯಾರಿಸಿರುವ ವರದಿ ಸ್ವೀಕಾರ, ಮಂಡನೆ, ಬಹಿರಂಗೊಳಿಸುವುದು ತುರ್ತು ಅಗತ್ಯವಿದೆ. ಅದರಲ್ಲೂ ಈ ವಿಷಯದಲ್ಲಿ ಕೋರ್ಟ್ ಕೇಳುತ್ತಿದ್ದ ಅನೇಕ ಪ್ರಶ್ನೇಗಳಿಗೆ ಉತ್ತರ ಕಂಡುಕೊಳ್ಳಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಮಹಾನಗರಪಾಲಿಕೆ ಮಾಜಿ ಸದಸ್ಯ ಎಸ್.ಮಲ್ಲಿಕಾರ್ಜುನ್, ದಲಿತ ಮುಖಂಡ ಹೀರಣ್ಣಯ್ಯ, ಅಂಜಿನಪ್ಪ ಮತ್ತಿತರರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";