ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲ್ಲೂಕು ಬಬ್ಬೂರಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಆಗಸ್ಟ್ 28 ರಿಂದ 30 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಆಸಕ್ತ ರೈತರಿಗೆ ಸಮಗ್ರ ಪಶುಪಾಲನಾ ಪದ್ದತಿ ಕುರಿತು ಮೂರು ದಿನಗಳ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೋಳ್ಳಲಾಗಿದೆ.
ಆಗಸ್ಟ್ 28ರಂದು ಬೆಳಗ್ಗೆ 10ಕ್ಕೆ ಹಿರಿಯೂರು ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ್, ಹೊಸಯಳನಾಡು ಪಶು ಆಸ್ಪತ್ರೆ ಹಿರಿಯ ಪಶು ವೈದ್ಯಾಧಿಕಾರಿ ಡಾ.ಗುರುಪ್ರಸಾದ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಆ.29ರಂದು ಪಶುಪಾಲನಾ ಇಲಾಖೆ ತುಮಕೂರುನಿವೃತ್ತ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ್ ಅವರು ಸಮಗ್ರ ಪಶುಪಾಲನಾ ಪದ್ದತಿಯಡಿ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಹಾಗೂ ನಾಟಿ ಕೋಳಿ ಸಾಕಾಣಿಕೆ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಆ.30ರಂದು 2024ನೇ ಸಾಲಿನ ಪಶುಸಂಗೋಪನೆ ಘಟಕದಡಿ ರೈತರತ್ನ ಪ್ರಶಸ್ತಿ ಪುರಸ್ಕøತ ಬ್ಯಾಡಗಿ ತಾಲ್ಲೂಕಿನ ಬುಡಪನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ಬಸವರಾಜ್ ಹೆಚ್ ಕ್ವಾಗಳಿ ಅವರು ನಾಟಿ ಕೋಳಿ ಸಾಕಾಣಿ ಮತ್ತು ತಾವು ಅಳವಡಿಸಿದ ಸಮಗ್ರ ಕೃಷಿ ಪದ್ದತಿ ಕುರಿತು ರೈತರಿಗೆ ತಮ್ಮ ಅನುಭವ ಹಂಚಿಕೊಳ್ಳುವರು.
ತದನಂತರ ಹೊಳಲ್ಕೆರೆ ತಾಲ್ಲೂಕಿನ ಬಸಾಪುರ ಗ್ರಾಮದ ಕೃಷಿಕರಾದ ಬಿ ಕುಮಾರಸ್ವಾಮಿ, ಹೊಸದುರ್ಗ ತಾಲ್ಲೂಕಿನ ಹಳೆಕುಂದೂರು ಗ್ರಾಮದ ಯುವ ಕೃಷಿಕರಾದ ಕೆ.ಎಮ್.ಗುರುಪ್ರಸಾದ್, ಹಿರಿಯೂರು ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ಯುವಕೃಷಿಕರಾದ ಎನ್.ಕಿರಣ್‍ಕುಮಾರ್ ಹಾಗೂ ಇತರೆ ರೈತರು ಕುರಿ ಮತ್ತು ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ ಮತ್ತು ಹೈನುಗಾರಿಕೆಯಲ್ಲಿ ಅನುಸರಿಸಿದ ಯಶಸ್ವಿ ಪದ್ದತಿಗಳ ಕುರಿತು ತಮ್ಮ ಅನುಭವ ಹಂಚಿಕೆಯನ್ನು ಮಾಡಿಕೊಳ್ಳುವರು.
ಆದ ಪ್ರಯುಕ್ತ ಆಸಕ್ತ 40 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ತರಬೇತಿಯ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ತಿಳಿಸಿದ್ದಾರೆ.
ಮೊದಲು ನೋಂದಾವಣಿ ಮಾಡಿಕೊಂಡ 40ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್‍ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನಚೀಟಿಯನ್ನು ತರಲು ಮನವಿ ಮಾಡಲಾಗಿದೆ.

