ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ ಇಬ್ಬರು ಉಪನ್ಯಾಸಕರು ಸೇರಿ ಮೂರು ಮಂದಿ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement - 

ಪ್ರಕರಣ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.
ನೋಟ್ಸ್ ನೀಡುವ ನೆಪದಲ್ಲಿ ಉಪನ್ಯಾಸಕ ನರೇಂದ್ರ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದರು.

- Advertisement - 

ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.

ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ. ಸಂದೀಪ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಸೇರಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

- Advertisement - 

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು ಈ ಕುರಿತು ತನಿಖೆ ನಡೆಯತ್ತಿದೆ ಎನ್ನಲಾಗಿದೆ.

 

Share This Article
error: Content is protected !!
";