ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಕೆರೆ ನೀರಿನಲ್ಲಿ ಮುಳುಗಿ ಮೂರು ಮಂದಿ ಸಾವನ್ನಪ್ಪಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು 27 ವರ್ಷದ ರಂಜಿತ್, 24 ವರ್ಷದ ರಮ್ಯಾ ಮತ್ತು 21 ವರ್ಷದ ಅಭಿಲಾಶ್ ಎಂದು ಗುರುತಿಸಲಾಗಿದೆ.
ದೀಪಾವಳಿ ಹಬ್ಬಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಮೂವರು ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀನಿವಾಸಪುರ ಮೂಲದ ಎಸ್. ರಂಜಿತ್ ಕುಮಾರ್, ರಾಮನಗರ ಮೂಲದ ರಮ್ಯಾ, ಚಂದಾಪುರ ಮೂಲದ ಅಭಿಲಾಷ್ ಸಂಬಂಧಿಕರ ಮನೆಗೆ ಬಂದಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸೆ, ಎಎಸ್ಪಿ ಆರ್.ಐ ಖಾಸಿಂ, ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.