ಮೂರು ತಿಂಗಳ ಅನ್ನಭಾಗ್ಯ ಹಣ, ಗೃಹಲಕ್ಷ್ಮಿ ಹಣ ಬಾಕಿ ಗೊತ್ತಿಲ್ಲ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಹಗರಣದಿಂದ ಬಚಾವಾಗಲು
, ಅಧಿಕಾರ ಹಂಚಿಕೆಯ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ರಣತಂತ್ರ ಹಣೆಯುವಲ್ಲಿ ಸಂಪೂರ್ಣವಾಗಿ busy ಆಗಿರುವ outgoing ಸಿಎಂ ಸಿದ್ದರಾಮಯ್ಯನವರಿಗೆ ಪಾಪ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ, ಗೃಹಲಕ್ಷ್ಮಿ ಹಣ ಪಾವತಿ ಬಾಕಿ ಇರುವುದೇ ಗೊತ್ತಿಲ್ಲವಂತೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

Outgoing ಸಿಎಂ ಸಿದ್ದರಾಮಯ್ಯ ನವರೇ, ತಮಗೆ ಗೊತ್ತಿಲ್ಲದೆ ತಮ್ಮ ಸರ್ಕಾರದಲ್ಲಿ ಇನ್ನೂ ಏನೇನು ಕರ್ಮಕಾಂಡ ನಡೆಯುತ್ತಿದೆಯೋ ಆ ಪರಮಾತ್ಮನಿಗೆ ಗೊತ್ತು. ತಮಗೆ ಗೊತ್ತಿಲ್ಲದೆ ಯಾವ್ಯಾವ ಮಂತ್ರಿಗಳು, ಯಾವ್ಯಾವ ಶಾಸಕರು ಅದೆಷ್ಟು ಲೂಟಿ ಹೊಡೆಯುತ್ತಿದ್ದಾರೋ ಆ ದೇವರೇ ಬಲ್ಲ.

 ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂಬ ಹಣೆಪಟ್ಟಿ ಕಟ್ಟಿಕೊಳ್ಳುವುದಕ್ಕಿಂತ ಈಗಲಾದರೂ ರಾಜೀನಾಮೆ ಕೊಟ್ಟು ಗೌರವದಿಂದ ನಿರ್ಗಮಿಸಿ. ತಾವು ಕುರ್ಚಿಗೆ ಅಂಟಿಕೊಂಡು ಕೂತಷ್ಟೂ ತಮ್ಮ ಗೌರವ, ವರ್ಚಸ್ಸು ಮತ್ತಷ್ಟು ಕಡಿಮೆ ಆಗುವುದಂತೂ ಗ್ಯಾರೆಂಟಿ ಎಂದು ಅಶೋಕ್ ತಿಳಿಸಿದ್ದಾರೆ.

 

Share This Article
error: Content is protected !!
";