ಚಂದ್ರವಳ್ಳಿ ನ್ಯೂಸ್, ತುಮಕೂರು:
ಕಂಟೈನರ್ ಲಾರಿ ಮತ್ತು ಬೈಕ್ ಮಧ್ಯ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ಜರುಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ತುಮಕೂರು ಸಮೀಪದ ಹಿರೇಹಳ್ಳಿ ಬಳಿಯ ನಂದಿಹಳ್ಳಿಯಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.
ಜೂ.6ರಂದು ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಗೋಪಾಲ್, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.