ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರ ಸಾವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಷ್ಟ್ರೀಯ ಹೆದ್ದಾರಿ ತಳಕು ಠಾಣಾ ವ್ಯಾಪ್ತಿಯ ಹಿರೇಹಳ್ಳಿ ಟೋಲ್ ಬಳಿ ಗುರುವಾರ ಸಂಜೆ ಲಾರಿಯೊಂದಕ್ಕೆ ಹಿಂಭಾಗದಿಂದ ರಭಸವಾಗಿ ಬಂದ ಕಾರು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ತೀರ್ವರಕ್ತಗಾಯದಿಂದ ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಾಯಗಳಿಂದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತುಮಕೂರು ಜಿಲ್ಲೆ ಗುಬ್ಬಿ ಮತ್ತು ಕುಣಿಗಲ್ ತಾಲ್ಲೂಕಿಗೆ ಸೇರಿದ ಐದು ಜನರು ಸ್ನೇಹಿತರಾಗಿದ್ದು, ಮಂತ್ರಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ.

- Advertisement - 

ಸಾರ್ವಜನಿಕ ಆಸ್ಪತ್ರೆಯಲ್ಲಿ ಸದಾಶಿವ ಮತ್ತು ಶಿವಕುಮಾರ್ ಎಂಬುವವರು ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನರಸಿಂಹಮೂರ್ತಿ, ಗಂಗಾಧರ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದು, ಈ ಬಗ್ಗೆ ಇನ್ನೂ ಸ್ವಷ್ಟತೆ ತಿಳಿಯಬೇಕಿದೆ.

ಸುದ್ದಿ ತಿಳಿದಕೂಡಲೇ ಉಪವಿಭಾಗದ ಡಿವೈಎಸ್ಪಿ ಎಂ.ಜಿ.ಸತ್ಯನಾರಾಯಣ ರಾವ್, ತಳಕು ವೃತ್ತ ನಿರೀಕ್ಷಕ ಹನುಮಂತಪ್ಪ ಶಿರೇಹಳ್ಳಿ, ಪಿಎಸ್‌ಐ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement - 

Share This Article
error: Content is protected !!
";