ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಾರಿಗೆ ಎರಿಟಿಗಾ ಕಾರು ಡಿಕ್ಕಿ ಹೊಡೆದ ಪರಿಣಾಮದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ 3 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಳೆಹಳ್ಳಿ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ಆಂದ್ರ ಪ್ರದೇಶ ಮೂಲದ ಸುನೀತ(34), ಶ್ಯಾಂ ಬಾಬು(19), ಶಿವ ನಾಗಲು(60) ಮೃತ ದುರ್ದೈವಿಗಳಾಗಿದ್ದಾರೆ.
ಮೃತರೆಲ್ಲರೂ ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ವೆಲ್ಲಂ ಪಾಳ್ಯಂ ನವರು ಎನ್ನಲಾಗಿದೆ. ಆಂದ್ರಪ್ರದೇಶದಿಂದ ಶಿವಮೊಗ್ಗ ಕಡೆ ತೆರಳುತ್ತಿದ್ದಾಗ ಬೀಕರ ಅಪಘಾತ.
ಶಿವಮೊಗ್ಗ ಕಡೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಅಶೋಕ್ ಅವರಿಗೆ ಗಂಭೀರ ಗಾಯವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಗಾಯಾಳು ಅಶೋಕ್ ರನ್ನು ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಪಿಎಸ್ಐ ಸಚಿನ್ ಪಾಟೀಲ್ ಭೇಟಿ ಪರಿಶೀಲಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.