ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಇಲ್ಲ, ಜೂ-10ಕ್ಕೆ ಮುಂದೂಡಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಮಿಳಿನಿಂದ ಕನ್ನಡ ಹುಟ್ಟಿದೆ ಎನ್ನುವ ಹೇಳಿಕೆ ನೀಡಿರುವ ನಟ ಕಮಲ್​ ಹಾಸನ್​ ಅವರು ಕರ್ನಾಟಕದ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ಅವರಿಗೆ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.

- Advertisement - 

ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು.
ನಾನು ಯಾವುದೇ ತಪ್ಪು ಮಾಡಿಲ್ಲ
, ಕ್ಷಮೆಯಾಚಿಸುವುದಿಲ್ಲ, ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ರಾಜಕೀಯ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದು ಕಮಲ್ ಹಾಸನ್ ಮೊಂಡು ಹಿಡಿದು ಕೂತಿದ್ದಾರೆ.

- Advertisement - 

ಇದರ ಮಧ್ಯ ಕಮಲ್​ ಹಾಸನ್​ ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಹೇಳಿತ್ತು.
ಎಲ್ಲ ಕಡೆಗಳಿಂದ ವ್ಯತಿರಿಕ್ತ ಪರಿಣಾಮ ಎದುರಿಸುತ್ತಿರುವ ಕಮಲ್ ಹಾಸನ್ ಅವರು ಮಂಗಳವಾರ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆಗೆ ಬಂತು. ಈ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ.

ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್​, ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ ಎಂದು ನ್ಯಾಯಾಧೀಶರು ಕಡ್ಡಿ ಮುರಿದಂತೆ  ಹೇಳಿದರು.

- Advertisement - 

ಆಗ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30 ವರೆಗೆ ಸಮಯಾವಕಾಶ ಕೋರಿದರು.
ಬಿಗ್ ಶಾಕ್ ನೀಡಿದ ಹೈಕೋರ್ಟ್- ಮಧ್ಯಾಹ್ನ ನಂತರವೂ ಕ್ಷಮೆ ಕೋರದಿದ್ದಾಗ  ಕರ್ನಾಟಕ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಇದೇ ಜೂನ್ 10ಕ್ಕೆ ಮುಂದೂಡಿತು. ಹಾಗಾಗಿ ಥಗ್ ಲೈಫ್ ಚಿತ್ರ ಜೂನ್ 5ಕ್ಕೆ ಬೆಂಗಳೂರಿನಲ್ಲಿ ಬಿಡುಗಡೆ ಆಗುವುದಿಲ್ಲ.

ಕಮಲ್ ಹಾಸನ್ ಮೊಂಡುಪಟ್ಟು ಹಿಡಿದಿದ್ದರಿಂದಾಗಿ ಚಿತ್ರ ಬಿಡುಗಡೆಗೆ ಹಿನ್ನಡೆಯಾಗಿದೆ. ನ್ಯಾಯಾಲಯಕ್ಕೆ ಮಾಹಿತಿ ನೀಡಿರುವ ಕಮಲ್ ಪರ ವಕೀಲರು, ಥಗ್ ಲೈಫ್ ಸಿನಿಮಾದ ನಿರ್ಮಾಪಕರು, ಸಿನಿಮಾ ಅನ್ನು ರಾಜ್ಯದಲ್ಲಿ ಬಿಡುಗಡೆ ಮಾಡದೇ ಇರಲು ನಿರ್ಧರಿಸಿದ್ದಾರೆ. ಅಲ್ಲದೆ, ಫಿಲಂ ಚೇಂಬರ್ ಜೊತೆಗೆ ನಿರ್ಮಾಪಕರು ಚರ್ಚೆ ನಡೆಸಲು ಸಿದ್ಧವಿದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದರು. ಹೀಗಾಗಿ ನ್ಯಾಯಾಲಯ ಅರ್ಜಿಯನ್ನು ಜೂನ್ 10ಕ್ಕೆ ಮುಂದೂಡಿ ಆದೇಶಿಸಿದೆ.

Share This Article
error: Content is protected !!
";