ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಳ್ಳಕೆರೆ ಹಾಗೂ ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನಾವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಲು 05-08-2025 ರಂದು ಅಧಿಸೂಚನೆ ಹೊರಡಿಸಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 12-03-2026 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ತಾಲ್ಲೂಕು ಶಿಶು ಅಭಿವೃದ್ಧಿ ಯೊಜನಾಧಿಕಾರಿಗಳ ಕಚೇರಿ ಸೂಚನಾ ಫಲಕ, ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಸಮುದಾಯ ಭವನ ಹಾಗೂ ಗ್ರಂಥಾಲಯಗಳಲ್ಲಿ ಪ್ರಕಟಿಸಲಾಗಿದೆ.

- Advertisement - 

ಸದರಿ ಆಯ್ಕೆ ಪಟ್ಟಿಗಳಿಗೆ ಆಕ್ಷೇಪಣೆಗಳು ಏನಾದರೂ ಇದ್ದಲ್ಲಿ, ಚಳ್ಳಕೆರೆಗೆ ಸಂಬಂಧಿಸಿದಂತೆ ಚಳ್ಳಕೆರೆಯ ಚಿತ್ರದುರ್ಗ ರಸ್ತೆಯ ತ್ಯಾಗರಾಜ ನಗರದ, ಎಸ್.ಬಿ.ಐ. ಬ್ಯಾಂಕ್ ಪಕ್ಕದಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಗೂ ಹೊಳಲ್ಕೆರೆಗೆ ಸಂಬಂಧಿಸಿದಂತೆ ಹೊಳಲ್ಕೆರೆ ಪಟ್ಟಣದ ಎನ್.ಹೆಚ್.13 ರಸ್ತೆಯಲ್ಲಿನ ಹರಿಕೃಪ ಬಿಲ್ಡಿಂಗ್‌ನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂದಿಗೆ ದಿನಾಂಕ 10-04-2026 ರ ಸಂಜೆ 5:30ರ ಒಳಗಾಗಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";